ಮಣಿಪಾಲ: ಹೋಟೆಲ್, ಫರ್ನಿಚರ್ ಮಳಿಗೆಯಲ್ಲಿ ಬೆಂಕಿ ಅವಘಡ, ಲಕ್ಷಾಂತರ ರೂ. ಮೌಲ್ಯದ ಸೊತ್ತು ಭಸ್ಮ

ಮಣಿಪಾಲ, ಎ.21: ಮಣಿಪಾಲ ಸಮೀಪದ ಲಕ್ಷ್ಮೀಂದ್ರ ನಗರದ ಒಂದೇ ಕಟ್ಟಡದಲ್ಲಿರುವ ಫರ್ನಿಚರ್ ಮಳಿಗೆ ಹಾಗೂ ಹೋಟೆಲ್ ವೊಂದರಲ್ಲಿ ಇಂದು ಬೆಳಗಿನ ಜಾವ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿರುವುದು ವರದಿಯಾಗಿದೆ. ಇದರಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ ಎನ್ನಲಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಮೊದಲಿಗೆ ಹೋಟೆಲ್ ನಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಕಟ್ಟಡಕ್ಕೆ ಹರಡಿತ್ತು ಎನ್ನಲಾಗಿದೆ. ಇದರಿಂದ ಹೆಚ್ಚು ಹಾನಿ ಸಂಭವಿಸಿರುವುದು ಫರ್ನಿಚರ್ ಮಳಿಗೆಗೆ. ಇಲ್ಲಿ ಬಹಳಷ್ಟು ಫರ್ನಿಚರ್ ಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಭಸ್ಮವಾಗಿವೆ. ಅದೇರೀತಿ ಹೋಟೆಲ್ ನ ಸೊತ್ತುಗಳ ಕೂಡ ಬೆಂಕಿಗೆ ಆಹುತಿಯಾಗಿವೆ. ಅಲ್ಲದೆ ಸಮೀಪದ ಕಟ್ಟಡಕ್ಕೂ ಬೆಂಕಿ ವ್ಯಾಪಿಸಿ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಷ್ಟದ ಅಂದಾಜು ಇನ್ನಷ್ಟೇ ತಿಳಿದು ಬರಬೇಕಾಗಿದೆ.






_0.jpeg)
_0.jpeg)
_0.jpeg)
_0.jpeg)
_0.jpeg)
_0.jpeg)
_0.jpeg)

