ರಾಜ್ಯ ಮಾಹಿತಿ ಆಯೋಗದ ನೂತನ ಆಯುಕ್ತರುಗಳು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು, ಎ.21: ಕರ್ನಾಟಕ ಮಾಹಿತಿ ಆಯೋಗದ ನೂತನ ಮಾಹಿತಿ ಆಯುಕ್ತರುಗಳಾಗಿ ನಿವೃತ್ತ ಐ.ಎ.ಎಸ್. ಅಧಿಕಾರಿ ಎಚ್.ಸಿ.ಸತ್ಯನ್, ಹಾಗೂ ರವೀಂದ್ರ ಗುರುನಾಥ ಡಾಕಪ್ಪ ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ರಾಜ್ಯ ಮಾಹಿತಿ ಆಯೋಗದ ಹಂಗಾಮಿ ಆಯುಕ್ತ ಸಂತೋಷ್ ಎಲ್. ಪಾಟೀಲ್ ಸೇರಿದಂತೆ ನೂತನ ಸದಸ್ಯರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.
ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ವಾಗತಿಸಿ, ವಂದಿಸಿದರು.
Next Story





