ಹುಬ್ಬಳ್ಳಿ ಹಿಂಸಾಚಾರ ಪ್ರಕರಣ: ಎಐಎಂಐಎಂ ಮುಖಂಡನ ಬಂಧನ

ಫೈಲ್ ಫೋಟೋ
ಹುಬ್ಬಳ್ಳಿ, ಎ.21: ಹಳೇ ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಎಐಎಂಐಎಂ ಮುಖಂಡನೋರ್ವನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಎಐಎಂಐಎಂ ಮುಖಂಡ ಮುಹಮ್ಮದ್ ಆರಿಫ್ ಬಂಧಿತ ಆರೋಪಿ. ಹಿಂಸಾಚಾರಕ್ಕೆ ಪ್ರಚೋದನೆ ಹಾಗೂ ಭಾಗಿಯಾದ ಆರೋಪದಲ್ಲಿ ಈತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಆರೋಪಿ ಅಭಿಷೇಕ್ ಹಿರೇಮಠ ಎಂಬಾತ ಸಾಮಾಜಿಕ ಮಾಧ್ಯಮ ವಾಟ್ಸ್ ಆ್ಯಪ್ ನಲ್ಲಿ ಹಾಕಿದ್ದ ವಿವಾದಾತ್ಮಕ ಸ್ಟೇಟಸ್ ಕಾರಣ ಎಪ್ರಿಲ್ 16ರಂದು ರಾತ್ರಿ ಹಳೇ ಹುಬ್ಬಳ್ಳಿಯಲ್ಲಿ ಹಿಂಸಾಚಾರ ನಡೆದಿತ್ತು. ಈ ವೇಳೆ ನಗರದಲ್ಲಿ ಕಲ್ಲು ತೂರಾಟ ನಡೆದಿದ್ದು, ಇನ್ ಸ್ಪೆಕ್ಟರ್ ಸೇರಿದಂತೆ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ 100ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.
Next Story





