ಜೆಡಿಎಸ್ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ: ಸಿಎಂ ಬೊಮ್ಮಾಯಿ

ತುಮಕೂರು, ಎ.21: ಜೆಡಿಎಸ್ ಬಗ್ಗೆ ಸಾಫ್ಟ್ ಇಲ್ಲ, ಕಾರ್ನರ್ ರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ, ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.
ಇತ್ತೀಚೆಗೆ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು.
ಸಂಸದ ಎಚ್.ಡಿ. ದೇವೇಗೌಡರು ತಮಗೆ ಕರೆ ಮಾಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ದೇವೇಗೌಡರು ನಮ್ಮ ಹಿರಿಯರು. ನನಗೆ ಕರೆ ಮಾಡಿ ಬೆಂಗಳೂರಿಗೆ ಯಾವಾಗ ಹಿಂದಿರುಗುತ್ತೀರಿ ಎಂದು ಪ್ರಶ್ನಿಸಿದರು. ಬಂದಾಗ ಕರೆ ಮಾಡಲು ತಿಳಿಸಿದರು ಎಂದರು.
Next Story





