Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಲಸ ಕದಿಯುವವರಿಗೆ ವೇತನ ಕಡಿತ ಶಿಕ್ಷೆ:...

ಕೆಲಸ ಕದಿಯುವವರಿಗೆ ವೇತನ ಕಡಿತ ಶಿಕ್ಷೆ: ಸಚಿವ ಡಾ.ಸುಧಾಕರ್

ಹಾಜರಾತಿ ಆಧರಿಸಿ ವೇತನ ಪಾವತಿ ವ್ಯವಸ್ಥೆ ಜಾರಿ

ವಾರ್ತಾಭಾರತಿವಾರ್ತಾಭಾರತಿ21 April 2022 7:02 PM IST
share
ಕೆಲಸ ಕದಿಯುವವರಿಗೆ ವೇತನ ಕಡಿತ ಶಿಕ್ಷೆ: ಸಚಿವ ಡಾ.ಸುಧಾಕರ್

ಬೆಂಗಳೂರು, ಎ. 21: ‘ಆರೋಗ್ಯ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ' ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

‘ಇತ್ತೀಚೆಗೆ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಆಸ್ಪತ್ರೆ, ಇಲಾಖೆ ಕಚೇರಿ ಮತ್ತು ಸಂಸ್ಥೆಗಳಲ್ಲಿ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದಿರುವ ಬಗ್ಗೆ ಸಾರ್ವಜನಿಕರು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ' ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದರು.

‘ನಿಜವಾದ ಕಾರಣಗಳಿಲ್ಲದೆ ಕೆಲಸ ಕದಿಯುವುದನ್ನು ಸಹಿಸಲು ಆಗುವುದಿಲ್ಲ. ಅವರ ಕರ್ತವ್ಯಲೋಪದಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುತ್ತದೆ. ಹೀಗಾಗಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದ ಯಾರೇ ಆಗಲಿ ಅಂತಹವರ ವೇತನ ಕಡಿತಕ್ಕೆ ಸೂಚನೆ ನೀಡಲಾಗಿದೆ. ಇಲಾಖೆ ಅಡಿಯಲ್ಲಿ ಬರುವ ಎಲ್ಲ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೂ ಅವರ ‘ಆಧಾರ್ ಆಧರಿತ ಬಯೋಮೆಟ್ರಿಕ್ ಹಾಜರಾತಿ' (ಎಇಬಿಎಎಸ್) ಕಡ್ಡಾಯಗೊಳಿಸಲಾಗಿದೆ. ಅದನ್ನು ಆಧರಿಸಿಯೇ ಇನ್ನು ಮುಂದೆ ವೇತನ ನೀಡುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ' ಎಂದು ಅವರು ವಿವರಿಸಿದರು. 

‘ಕೋವಿಡ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಬಯೋಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಎರಡು ತಿಂಗಳ ಹಿಂದಿನಿಂದಲೇ ಮತ್ತೆ ಕಡ್ಡಾಯಗೊಳಿಸಲಾಗಿದೆ. ಅನೇಕ ಸಭೆಗಗಳಲ್ಲಿ ಮತ್ತು ಸುತ್ತೋಲೆ ಮೂಲಕವೂ ಈ ಬಗ್ಗೆ ಸೂಚನೆ ನೀಡಲಾಗಿದೆ. ಆದರೂ, ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಹಾಜರಾತಿ ದಾಖಲಿಸದಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈಗ ಸ್ಪಷ್ಟ ಎಚ್ಚರಿಕೆ ಜತೆಗೆ ಅಧಿಕೃತ ಆದೇಶ ನೀಡಿದ್ದು ಅಂತಹ ಪ್ರಕರಣಗಳನ್ನು ಗೈರು ಹಾಜರಿ ಎಂದು ಪರಿಗಣಿಸಿ ವೇತನ ಕಡಿತಗೊಳಿಸಲಾಗುತ್ತದೆ' ಎಂದು ಅವರು ಎಚ್ಚರಿಕೆ ನೀಡಿದರು.

ಡಿಡಿಒ ಹೊಣೆ: ‘ಇಲಾಖೆಯ ಆಸ್ಪತ್ರೆ, ಸಂಸ್ಥೆ ಮತ್ತು ಕೇಂದ್ರಗಳ ಜವಾಬ್ದಾರಿ ನಿರ್ವಹಿಸುವ ಡಿಡಿಒ(ಸ್ಯಾಲರಿ ಡ್ರಾಯಿಂಗ್ ಆಫೀಸರ್)ಗಳು ಪ್ರತಿ ತಿಂಗಳು ಎಇಬಿಎಎಸ್‍ನಲ್ಲಿ ತಮ್ಮ ವ್ಯಾಪ್ತಿಯ ಎಲ್ಲ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ ಅದರ ಅನುಸಾರವೇ ವೇತನ ಪಾವತಿಗೆ ವರದಿ ಸಿದ್ಧಪಡಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ(ಡಿಎಚ್‍ಒ) ಸಲ್ಲಿಸಬೇಕು. ಅವರು ಅದನ್ನು ಪರಿಶೀಲಿಸಿ ವೇತನ ಬಿಡುಗಡೆ ಮತ್ತು ಕಡಿತಕ್ಕೆ ಸೂಚನೆ ನೀಡಲಿದ್ದಾರೆ. ಡಿಎಚ್‍ಒ ಅವರು ಕೈಗೊಂಡ ಕ್ರಮಗಳನ್ನ ಮೇಲಿನ ಹಂತದ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಲಿದ್ದಾರೆ' ಎಂದು ಸ್ಪಷ್ಟಪಡಿಸಿದರು

‘ಯಾರೇ ಆಗಲಿ ಶೇ.80ರಷ್ಟು ಹಾಜರಾತಿಗಿಂತ ಕಡಿಮೆ ಇದ್ದಲ್ಲಿ ಅವರ ವೇತನ ತಡೆ ಹಿಡಿಯಲಾಗುತ್ತದೆ. ನಂತರ ಮಾರ್ಗಸೂಚಿ ಅನ್ವಯ ಮುಂದಿನ ಕ್ರಮ ವಹಿಸಲಾಗುವುದು. ಒಂದು ವೇಳೆ ಶೇ.80ರಷ್ಟು ಹಾಜರಾತಿ ಇದ್ದಲ್ಲಿ ವೇತನ ಬಿಡುಗಡೆ ಮಾಡಿ ಉಳಿದ ಶೇ.20 ಹಾಜರಾತಿ ದಾಖಲು ಮಾಡದಿರುವುದಕ್ಕೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗುತ್ತದೆ. ಸಿಬ್ಬಂದಿ ನೀಡುವ ಕಾರಣ ನಿಜವಾಗಿದ್ದಲ್ಲಿ ಪ್ರಕರಣ ಮುಕ್ತಾಯಗೊಳಿಸಲಾಗುವುದು. ಒಂದು ವೇಳೆ ಸಬೂಬು ನೀಡಿದರೆ ಅಥವಾ ನೀಡಿರುವ ಮಾಹಿತಿ ಸುಳ್ಳು ಆಗಿದ್ದಲ್ಲಿ ಮುಂದಿನ ತಿಂಗಳ ವೇತನದಲ್ಲಿ ನಿರ್ದಿಷ್ಟಪಡಿಸಿರುವ ಮೊತ್ತವನ್ನುಕಡಿತಗೊಳಿಸಲಾಗುವುದು' ಎಂದು ತಿಳಿಸಿದರು. 

‘ಒಂದು ವೇಳೆ ಎಇಬಿಎಎಸ್ ಅನುಷ್ಠಾನಗೊಳಿಸದೆ, ಹಾಜರಾತಿ ಪರಿಶೀಲಿಸದೆ ವೇತನ ಪಾವತಿಸಿದರೆ ಆಯಾ ಡಿಡಿಒಗಳನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು. ಇದನ್ನು ಸರಿಯಾಗಿ ಉಸ್ತುವಾರಿ ಮಾಡದಿದ್ದಲ್ಲಿ ಡಿಎಚ್‍ಒಗಳ ವಿರುದ್ಧವೂ ಕ್ರಮ ಕೈಗೊಳ್ಳಲು ವರದಿ ನೀಡುವಂತೆ ಜಿಲ್ಲೆಗಳ ಉಸ್ತುವಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಪ್ರತಿ ವಾರ ಪರಿಶೀಲನೆ: ‘ಪ್ರತಿ ವಾರ ಇಲಾಖೆ ಪ್ರಗತಿ ಪರಿಶೀಲನೆಯಲ್ಲಿ ಉಳಿದ ಅಂಶಗಳ ಜತೆಗೆ ಹಾಜರಾತಿ ಕಡ್ಡಾಯ ಮತ್ತು ವೇತನಕ್ಕೆ ಸಂಯೋಜನೆಗೊಳಿಸಿರುವ ವ್ಯವಸ್ಥೆಯನ್ನು ಪರಾಮರ್ಶೆ ಮಾಡಲಾಗುತ್ತಿದೆ. ಅನುಷ್ಠಾನದಲ್ಲಿ ಲೋಪ ಕಂಡರೆ ನಿರ್ದಾಕ್ಷಿಣ್ಯ ಕ್ರಮ ನಿಶ್ಚಿತ. ಆರೋಗ್ಯಸೌಧ ಸೇರಿದಂತೆ ಇಲಾಖೆ ವ್ಯಾಪ್ತಿಯ ಎಲ್ಲ್ಲ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ಸೇವಾ ಸಿಬ್ಬಂದಿ ಮತ್ತು ಕಚೇರಿ ಸಿಬ್ಬಂದಿಗಳು ಎಇಬಿಎಎಸ್‍ನಲ್ಲಿ ದಿನಕ್ಕೆ ಮೂರು ಬಾರಿ ತಮ್ಮ ಹಾಜರಾತಿ ದಾಖಲಿಸಲು ಸೂಚಿಸಲಾಗಿದೆ. ಕಚೇರಿ, ಆಸ್ಪತ್ರೆಗಳಲ್ಲಿ ಪ್ರತ್ಯೇಕ ಸಮಯ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.

ಇಲಾಖೆಯ ಹೊಣೆ ಹೊತ್ತಿರುವ ಆಯುಕ್ತ ರಂದೀಪ್ ಅವರೇ ಬಯೋಮೆಟ್ರಿಕ್ ಹಾಜರಾತಿ ನೋಂದಯಿಸಿ ಅನುಸರಿಸುವ ಮೂಲಕ ಉಳಿದ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಮಾದರಿಯಾಗಿದ್ದಾರೆ ಎಂದೂ ಸಚಿವ ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಹಾಜರಾತಿ ದಾಖಲು ವೇಳಾಪಟ್ಟಿ:

ಆಡಳಿತ ಕಚೇರಿಗಳು: ಬೆಳಗ್ಗೆ-10, ಮಧ್ಯಾಹ್ನ-1, ಸಂಜೆ-5.30.

ಆಸ್ಪತ್ರೆಗಳು: ಬೆಳಗ್ಗೆ-9, ಮಧ್ಯಾಹ್ನ-1, 

ಸಂಜೆ-4.30 (ಸಾರ್ವತ್ರಿಕ ರಜಾ ದಿನಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಎರಡು ಬಾರಿ ಮಾತ್ರ).

ಆಸ್ಪತ್ರೆಗಳಲ್ಲಿ ಪಾಳಿಯಲ್ಲಿ ಕೆಲಸ ಮಾಡುವವರು: 1ನೆ ಪಾಳಿ-ಬೆಳಗ್ಗೆ-8; ಬೆಳಗ್ಗೆ-11, ಮಧ್ಯಾಹ್ನ–2; 2ನೆ ಪಾಳಿ –ಮಧ್ಯಾಹ್ನ–2; ಸಂಜೆ-5; ರಾತ್ರಿ–8; 3ನೆ ಪಾಳಿ–ರಾತ್ರಿ–8, ಮಧ್ಯರಾತ್ರಿ 12; ಮರುದಿನ ಬೆಳಗ್ಗೆ-8;(ತಾಂತ್ರಿಕ ಅಡಚಣೆ ಇರುವ ಕಡೆ ಮಧ್ಯರಾತ್ರಿ 12ಕ್ಕೆ ಬೇಡ, ಸಮಸ್ಯೆ ಬಗೆಹರಿದ ಬಳಿಕ ಕಡ್ಡಾಯ).

ವಿಶೇಷ ಸಂದರ್ಭಗಳಲ್ಲಿ (ಅಪಘಾತ, ತುರ್ತು ಸೇವೆ, ಆಪರೇಷನ್) ಕರ್ತವ್ಯನಿರತ ವೈದ್ಯರು, ಶುಶ್ರೂಷಕ ಸಿಬ್ಬಂದಿ ಮೂರು ಬಾರಿ ಹಾಜರಾತಿ ಹಾಕಲು ಸಾಧ್ಯವಾಗದಿದ್ದಲ್ಲಿ ಸದರಿ ಸಂದರ್ಭಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಜಿಲ್ಲಾ ಶಸ್ತ್ರಚಿಕಿತ್ಸಕರು ಅಥವಾ ಆಡಳಿತ ವೈದ್ಯಾಧಿಕಾರಿಗಳು ಖಾತರಿಪಡಿಸಿಕೊಂಡು ಆ ದಿವಸಗಳಲ್ಲಿ ವಿನಾಯಿತಿ ನೀಡಬಹುದು. ಆದರೆ, ಕನಿಷ್ಠ ಎರಡು ಬಾರಿ(ಆಗಮನ ಮತ್ತು ನಿರ್ಗಮನ) ಹಾಜರಾತಿ ದಾಖಲಿಸಲೇಬೇಕು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X