ವಾಯವ್ಯ ಶಿಕ್ಷಕರ ಕ್ಷೇತ್ರ: ಪ್ರಕಾಶ್ ಹುಕ್ಕೇರಿಗೆ ಕಾಂಗ್ರೆಸ್ ಟಿಕೆಟ್

ಪ್ರಕಾಶ್ ಹುಕ್ಕೇರಿ
ಬೆಳಗಾವಿ, ಎ.21: ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ಗೆ ಮುಂಬರಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಪ್ರಕಾಶ ಹುಕ್ಕೇರಿ ಅವರನ್ನು ಆಯ್ಕೆ ಮಾಡಲಾಗಿದೆ.
ಕಳೆದ ಮೂರು ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಪರಾಜಿತರಾಗಿದ್ದ ಎನ್.ಬಿ. ಬನ್ನೂರ ಅವರು ಮತ್ತೊಮ್ಮೆ ಟಿಕೆಟ್ ಆಕಾಂಕ್ಷಿಯಾಗಿದ್ದರು. ಪ್ರಚಾರವನ್ನೂ ಆರಂಭಿಸಿದ್ದರು. ಆದರೆ, ಪಕ್ಷದ ಹೈಕಮಾಂಡ್ ಪ್ರಕಾಶ್ ಅವರಿಗೆ ಮಣೆ ಹಾಕಿದೆ. ಅವರು, ಮಾಜಿ ಸಚಿವ ಹಾಗೂ ಚಿಕ್ಕೋಡಿಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದ.
ಬಿಜೆಪಿಯು, ಈ ಕ್ಷೇತ್ರದ ಹಾಲಿ ಸದಸ್ಯ ಅರುಣ ಶಹಾಪುರ ಅವರಿಗೆ ಟಿಕೆಟ್ ನೀಡಿದೆ.
‘ಪಕ್ಷವು ಹುಕ್ಕೇರಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಇದರಿಂದ ಸಾವಿರಾರು ಶಿಕ್ಷಕರು ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಶಿಕ್ಷಕ ಸಮುದಾಯದ ಪ್ರಮುಖರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇನೆ. ಅಲ್ಲಿವರೆಗೆ ಶಿಕ್ಷಕರು ತಾಳ್ಮೆಯಿಂದ ಇರಬೇಕು’
-ಎನ್.ಬಿ.ಬನ್ನೂರ, ಟಿಕೆಟ್ ವಂಚಿತ ಕಾಂಗ್ರೆಸ್ ಅಭ್ಯರ್ಥಿ







