ಎ.23ಕ್ಕೆ ಆರೋಗ್ಯ ಮೇಳ
ಉಡುಪಿ : ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಆಯುಷ್ ವಿಭಾಗ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಹಾಗೂ ರೋಟರಿ ಮಿಡ್ಟೌನ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ, ದೇಶದ ೭೫ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಉಡುಪಿ ತಾಲೂಕು ಮಟ್ಟದ ಬೃಹತ್ ಆರೋಗ್ಯ ಮೇಳ ಎ.೨೩ರಂದು ಬೆಳಗ್ಗೆ ೧೦:೩೦ಕ್ಕೆ ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿ ದ್ದಾರೆ. ಜಿಲ್ಲೆಯಲ್ಲಿ ಶಾಸಕರು, ಜನಪ್ರತಿನಿಧಿಗಳು ಹಾಗೂ ಹಿರಿಯ ಸರಕಾರಿ ಅಧಿಕಾರಿಗಳು ಕಾರ್ಯಕ್ರಮದಲಿಲ ಭಾಗವಹಿಸಲಿದ್ದಾರೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.
Next Story