Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಳಲಿ: ಮಸೀದಿ ನವೀಕರಣಕ್ಕೆ ಅಡ್ಡಿ; ದ.ಕ....

ಮಳಲಿ: ಮಸೀದಿ ನವೀಕರಣಕ್ಕೆ ಅಡ್ಡಿ; ದ.ಕ. ಜಿಲ್ಲಾಧಿಕಾರಿ ತಂಡದಿಂದ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ21 April 2022 9:16 PM IST
share
ಮಳಲಿ: ಮಸೀದಿ ನವೀಕರಣಕ್ಕೆ ಅಡ್ಡಿ; ದ.ಕ. ಜಿಲ್ಲಾಧಿಕಾರಿ ತಂಡದಿಂದ ಪರಿಶೀಲನೆ

ಮಂಗಳೂರು : ತಾಲೂಕಿನ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮ, ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿಯಲ್ಲಿರುವ ನೂರಾರು ವರ್ಷಗಳ ಹಳೆಯ ಜುಮಾ ಮಸೀದಿ ಕಟ್ಟಡ ನವೀಕರಣದ ಸಂದರ್ಭದಲ್ಲಿ ಪ್ರಾಚೀನ ದೇವಸ್ಥಾನದ ಕುರುಹು ಪತ್ತೆಯಾಗಿದೆ ಎಂಬ ಸುದ್ದಿ ಹರಡಿ ಮಳಲಿ ಪರಿಸರದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡ ಘಟನೆ ಗುರುವಾರ ನಡೆದಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡಲು ಆರಂಭಿಸಿದಂತೆ ಮಸೀದಿ ಬಳಿ ಜಮಾವಣೆಗೊಂಡ ಸಂಘ ಪರಿವಾರದ ಕಾರ್ಯಕರ್ತರು ಮಸೀದಿಯೊಳಗೆ ದೇವಸ್ಥಾನ ಇದೆ ಎಂದು ತಗಾದೆ ಎತ್ತಿದರೆನ್ನಲಾಗಿದೆ. ಈ ಬಗ್ಗೆ ಮಸೀದಿಗೆ ಸಂಬಂಧಿಸಿದವರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಮಸೀದಿಗೆ ರಕ್ಷಣೆ ಒದಗಿಸಿದ್ದಾರೆ.

ಪೊಲೀಸರ ಮಾಹಿತಿಯ ಮೇರೆಗೆ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಮಂಗಳೂರು ತಹಶೀಲ್ದಾರ್  ಭೇಟಿ ನೀಡಿ ಮಸೀದಿಯ ಸ್ಥಳ ಹಾಗೂ ಮಸೀದಿಗೆ ಸಂಬಂಧಿಸಿದ ದಾಖಲೆಪತ್ರಗಳನ್ನು ಸಂಘಪರಿವಾರದ ಮುಖಂಡರ ಸಮ್ಮುಖದಲ್ಲಿ ಪರಿಶೀಲಿಸಿದರು. ಬಳಿಕ ಮಸೀದಿಯ ದಾಖಲೆ ಪತ್ರಗಳನ್ನು ಜಿಲ್ಲಾಧಿಕಾರಿ ವಶಕ್ಕೆ ಪಡೆದಿದ್ದು, ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಎಂಡೋಮೆಂಟ್ ಮತ್ತು ವಕ್ಫ್ ಬೋರ್ಡ್‌ನಿಂದ ವರದಿ ಪಡೆದು ವಾರದೊಳಗೆ ಸಮಸ್ಯೆ ಪರಿಹರಿಸುವುದಾಗಿ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

"ಸುಮಾರು 900 ವರ್ಷಗಳ ಇತಿಹಾಸವಿರುವ ಮಳಲಿ ಪೇಟೆ ಜುಮಾ ಮಸೀದಿಯನ್ನು ನವೀಕರಣಗೊಳಿಸಲು ಉದ್ದೇಶಿಸಲಾಗಿದೆ. ಅದರಂತೆ ಒಳಗಿನ ಮಸೀದಿಯ ಇತಿಹಾಸಕ್ಕೆ ಧಕ್ಕೆಯಾಗದಂತೆ ರಕ್ಷಿಸಿ ಹೊರಭಾಗವನ್ನು ಕೆಡವಿ ನವೀಕರಣ ಮಾಡುವುದಕ್ಕಾಗಿ ಹೊರಗಿನ ಪಾರ್ಶ್ವವನ್ನು ಕೆಡವಲಾಗಿತ್ತು. ಈ ನಡುವೆ ಯಾರೋ ಕಿಡಿಗೇಡಿಗಳು ಒಳಗಿನ ಮಸೀದಿಯ ಚಿತ್ರವನ್ನು ದೇವಸ್ಥಾನ ಎಂದು ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹರಡಿರುವುದೇ ಈ ಗೊಂದಲಕ್ಕೆ ಕಾರಣವಾಗಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಬಂದು ಪರಿಶಿಲಿಸಿದ್ದಾರೆ. ಅವರಿಗೆ ದೇವಸ್ಥಾನ ಇರುವ ಕುರಿತು ಯಾವುದೇ ಕುರುಹು ಲಭ್ಯವಾಗಿಲ್ಲ. ಆದರೂ, ಮಸೀದಿಯ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದು, ವಾರದ ಒಳಗಾಗಿ ಸಮಸ್ಯೆ ಪರಿಹರಿಸುವುದಾಗ ಭರವಸೆ ನೀಡಿದ್ದಾರೆ".

- ಮುಹಮ್ಮದ್ ಮಾಮು 
ಮಳಲಿ ಪೇಟೆ ಜುಮಾ ಮಸೀದಿಯ ಅಧ್ಯಕ್ಷ

"ಈ ಸಮಸ್ಯೆಯ ಕುರಿತು ಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆಯಲಾಗಿದೆ. ಜಿಲ್ಲಾಡಳಿತವು ಹಳೆಯ ಭೂ ದಾಖಲೆಗಳು ಮತ್ತು ಮಾಲಕತ್ವದ ವಿವರಗಳನ್ನು  ಪರಿಶೀಲಿಸುತ್ತಿದೆ. ಅಲ್ಲದೆ ಧಾರ್ಮಿಕ ದತ್ತಿ ಇಲಾಖೆ ಮತ್ತು ವಕ್ಫ್ ಬೋರ್ಡ್‌ಗಳಿಂದಲೂ ವರದಿಯನ್ನು ತರಿಸಿ ಸಮಗ್ರ ಪರಿಶೀಲನೆ ನಡೆಸಲಿದ್ದೇವೆ. ಹಕ್ಕುಗಳ ಸತ್ಯಾಸತ್ಯತೆಯನ್ನು ಪಡೆದು ಶೀಘ್ರದಲ್ಲೇ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗು ವುದು. ಅಲ್ಲಿಯವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೂಡಾ ಯಾವುದೇ ಆತುರದ ನಿರ್ಧಾರ ಕೈಗೊಳ್ಳದೆ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಬೇಕು".

-ಡಾ.ಕೆ.ವಿ.ರಾಜೇಂದ್ರ, ಜಿಲ್ಲಾಧಿಕಾರಿ, ದ.ಕ.

"ಈ ಬಗ್ಗೆ ಸಮಗ್ರ ಅಧ್ಯಯನಕ್ಕೆ ಪ್ರಾಚ್ಯವಸ್ತು ಹಾಗೂ ಭೂ ಕಂದಾಯ ಇಲಾಖೆಗೆ ಸೂಚಿಸಲಾಗುವುದು. ಇವೆರಡು ಇಲಾಖೆಗಳ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು".
-ಪುರಂದರ ಹೆಗ್ಡೆ, 
ತಹಶೀಲ್ದಾರ್, ಮಂಗಳೂರು ತಾಲೂಕು

ʼʼಸ್ಥಳಕ್ಕೆ ಭೇಟಿ ನೀಡಲಾಯಿತು. ಸ್ಥಳೀಯರ ಜತೆ ಮಾತನಾಡಲಾಯಿತು. ದ.ಕ. ಜಿಲ್ಲಾಧಿಕಾರಿ ಜತೆ ಚರ್ಚಿಸಲಾಯಿತು. ಅಗತ್ಯ ಬಂದೋಬಸ್ತ್ ಮಾಡಲಾಗಿದೆ.

ಎನ್.ಶಶಿಕುಮಾರ್,  ಪೊಲೀಸ್ ಆಯುಕ್ತರು, ಮಂಗಳೂರು ನಗರ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X