ಬೆಂಗಳೂರು | 70 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ; ನೈಜೀರಿಯಾ ಪ್ರಜೆಯ ಬಂಧನ

ಸಾಂದರ್ಭಿಕ ಚಿತ್ರ
ಬೆಂಗಳೂರು, ಎ.21: ಮಾದಕ ವಸ್ತುಗಳ ಮಾರಾಟ ಸರಬರಾಜು ಸೇವನೆ ವಿರುದ್ಧ ಕಾರ್ಯ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ನೈಜೀರಿಯಾ ಪ್ರಜೆಯೊಬ್ಬನನ್ನು ಬಂಧಿಸಿ 70 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ.
ಪಾಸ್ ಪೋರ್ಟ್ ವೀಸಾ ನಿಯಮಗಳನ್ನು ಉಲ್ಲಂಘನೆ ಮಾಡಿ ಬಾಣಸವಾಡಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಆರೋಪಿಯು ಪರಿಚಯಸ್ಥ ಗ್ರಾಹಕರಿಗೆ ಶ್ರೀಮಂತರಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಎನ್ನುವ ಮಾಹಿತಿ ಗೊತ್ತಾಗಿದೆ.
ಬಂಧಿತ ಆರೋಪಿಯಿಂದ 70 ಲಕ್ಷ ಬೆಲೆ ಬಾಳುವ 800 ಗ್ರಾಂ ತೂಕದ ಎಂಡಿಎಂಎ, ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.
The CCB nabbed a Nigerian drug peddler in Banasawadi Police Station limits, seized worth Rs 70 lakh of 800 gm MDMA crystals, a mobile phone and an electronic weighing machine. pic.twitter.com/KzrOsQQahb
— Raman Gupta IPS (@JointCP_crime) April 21, 2022







