ಗುರುವಾಯನಕೆರೆ | ರಾಜ್ಯ ಹೆದ್ದಾರಿಗೆ ಬಿದ್ದ ಬೃಹತ್ ಗಾತ್ರದ ಮರ: ವಿದ್ಯುತ್ ಕಂಬಗಳಿಗೆ ಹಾನಿ

ಬೆಳ್ತಂಗಡಿ, ಎ.22: ಗುರುವಾಯನಕೆರೆ ಪೊಟ್ಟುಕೆರೆ ಕಾರ್ಕಳ ರಸ್ತೆ ತಿರುವಿನ ರಾಜ್ಯ ಹೆದ್ದಾರಿ ರಸ್ತೆಗೆ ಬೃಹದಾಕಾರದ ಮರವೊಂದು ಅಡ್ಡಲಾಗಿ ಉರುಳಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.
ಬೆಳಗ್ಗಿನ ಜಾವ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಮರ ವಿದ್ಯುತ್ ಲೈನಿನ ಮೇಲೆ ಬಿದ್ದಿದ್ದು ವಿದ್ಯುತ್ ಕಂಬಗಳಿಗೂ ಹಾನಿಯಾಗಿದೆ. ಸ್ಥಳೀಯರ ಸಹಕಾರದೊಂದಿಗೆ ಇದೀಗ ಮರವನ್ನು ತೆರವು ಗೊಳಿಸಲಾಗಿದೆ. ಮೆಸ್ಕಾಂ ಇಲಾಖೆಯವರು ವಿದ್ಯುತ್ ಲೈನ್ ಸರಿಪಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Next Story