ತಾರಾನಾಥ ವರ್ಕಾಡಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ

ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ, ಯಕ್ಷಗಾನ ಕ್ಷೇತ್ರದ ವಿದ್ವಾಂಸರಿಗೆ ನೀಡುವ ಈ ವರ್ಷದ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಯಕ್ಷಗಾನ ಕಲಾವಿದ, ಅರ್ಥಧಾರಿ, ಪ್ರಸಂಗ ಕರ್ತ, ಲೇಖಕ, ಯಕ್ಷಗುರು ಸೇರಿದಂತೆ ಕಲೆ-ಸಾಹಿತ್ಯ ಸಂಬಂಧಿ ಬಹು ಆಯಾಮಗಳಲ್ಲಿ ಸಾಧನೆ ಮಾಡಿದ ತಾರಾನಾಥ ವರ್ಕಾಡಿ ಅವರನ್ನು ಆಯ್ಕೆ ಮಾಡಿದೆ.
ಪ್ರಶಸ್ತಿ ಪ್ರದಾನ ಸಮಾರಂಭ ಮೇ 22ರ ರವಿವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ವಿವಿಧ ಕಲಾ ಕಾರ್ಯಕ್ರಮದೊಂದಿಗೆ ಸಂಪನ್ನಗೊಳ್ಳಲಿದೆ. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರಗಲಿದೆ. ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ಪ್ರಾಯೋಜಕತ್ವದ ಈ ಪ್ರಶಸ್ತಿಯು 40,000ರೂ. ನಗದು ಪುರಸ್ಕಾರವನ್ನು ಒಳಗೊಂಡಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story