ದ್ವಿತೀಯ ಪಿಯು ಪರೀಕ್ಷೆ; ದ.ಕ.ಜಿಲ್ಲೆಯಲ್ಲಿ 337 ವಿದ್ಯಾರ್ಥಿಗಳು ಗೈರು

ಮಂಗಳೂರು : ಶುಕ್ರವಾರ ಆರಂಭಗೊಂಡ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದ.ಕ.ಜಿಲ್ಲೆಯ 337 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಜಿಲ್ಲೆಯ 51 ಕೇಂದ್ರಗಳಲ್ಲಿ 14848 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿದ್ದರು. ಆ ಪೈಕಿ 14511 ವಿದ್ಯಾರ್ಥಿಗಳು ಹಾಜರಾಗಿದ್ದು, 337 ಗೈರಾಗಿದ್ದಾರೆ ಎಂದು ಡಿಡಿಪಿಯು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story