ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಬ್ರಹ್ಮಾವರ : ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.21ರಂದು ರಾತ್ರಿ ಉಪ್ಪೂರು ರಿಕ್ಷಾ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ನಾಗರಾಜ್ ಎಂದು ಗುರುತಿಸಲಾಗಿದೆ. ಬ್ರಹ್ಮಾವರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು, ಡಿವೈಡರ್ ನಿಂದ ಇಳಿದು ರಸ್ತೆ ದಾಟುತ್ತಿದ್ದ ನಾಗರಾಜ್‌ಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ನಾಗರಾಜ್ ಎಸೆಯಲ್ಪಟ್ಟು ಕಾರಿನ ಗಾಜಿನ ಮೇಲೆ, ಬಳಿಕ ರಸ್ತೆಯ ಮೇಲೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ನಾಗರಾಜ್, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ರೆನ್ನಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story