ಪಡುಬಿದ್ರೆ : ರಸ್ತೆ ಅಪಘಾತ; ಗಾಯಾಳು ಯುವಕ ಮೃತ್ಯು

ಪಡುಬಿದ್ರೆ : ಬೈಕ್‌ಗೆ ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪಲಿಮಾರುನ ನಿವಾಸಿ ಖಲಂದರ್ ರಫೀಕ್ ಶನಿವಾರ ಮುಂಜಾನೆ ಮೃತಪಟ್ಟಿದ್ದಾರೆ.
ಶುಕ್ರವಾರ ಮಧ್ಯಾಹ್ನ ಎರ್ಮಾಳು ಮಸೀದಿಯಿಂದ ಪಡುಬಿದ್ರೆಗೆ ತನ್ನ ಬೈಕ್ ನಲ್ಲಿ ಹೋಗುತ್ತಿದ್ದಾಗ ಟೆಂಪೋ ಹಿಂಬದಿಯಿಂದ ಬಂದು ಢಿಕ್ಕಿ ಹೊಡೆದಿತ್ತು. ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ಖಲಂದರ್ ರಫೀಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story