ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ; ಆಡಿಯೋ ಬಗ್ಗೆಯೂ ತನಿಖೆ ಮಾಡಿಸಲಾಗುವುದು: ಸಿಎಂ ಬೊಮ್ಮಾಯಿ

ಬೆಂಗಳೂರು: 'ಪಿಎಸ್ ಐ ಅಕ್ರಮ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರು ಇದ್ದರೂ ಕ್ರಮ ಕೈಗೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರು ಬಿಡುಗಡೆ ಮಾಡಿದ ಆಡಿಯೊ ಬಗ್ಗೆ ಪ್ರತಿಕ್ರಿಯಿಸಿದರು.
'ಆಡಿಯೊ ನಾನು ನೋಡಿಲ್ಲ, ಆಡಿಯೊದಲ್ಲಿರುವ ಸತ್ಯಾಸತ್ಯತೆ ಕುರಿತು ಎಲ್ಲವನ್ನೂ ತನಿಖೆ ಮಾಡಿಸಲಾಗುವುದು’ ಎಂದರು.
'ಈ ಪ್ರಕರಣದಲ್ಲಿ ಯಾರ್ಯಾರಿದ್ದಾರೆ ಎಂದು ಪತ್ತೆ ಹಚ್ಚಲಾಗುವುದು. ವಿಶೇಷವಾಗಿ ಪರೀಕ್ಷೆ ನಡೆಯುವಾಗ ಅಭ್ಯರ್ಥಿಗಳಿಗೆ ಸಹಾಯ ಮಾಡಿದವರು ಯಾರು, ಇದರ ಹಿಂದೆ ಯಾರಿದ್ದಾರೆ ಎಂದು ತನಿಖಾಧಿಕಾರಿಗಳು ಪತ್ತೆ ಹಚ್ಚಲಿದ್ದಾರೆ. ಅವರು ಯಾವ ಪಕ್ಷದವರಿರಲಿ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ' ಎಂದು ತಿಳುಸಿದರು.
ಕಲಬುರಗಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಪ್ರಿಯಾಂಕ್ ಖರ್ಗೆ, 402 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿಯೂ ಅಕ್ರಮವಾಗಿ ಆಯ್ಕೆಯಾಗುವ ಬಗ್ಗೆ ಇಬ್ಬರು ವ್ಯಕ್ತಿಗಳ ನಡುವೆ ನಡೆದ ಸಂಭಾಷಣೆಯ ಆಡಿಯೋ ಟೇಪ್ ಬಿಡುಗಡೆ ಮಾಡಿದ್ದಾರೆ.







