ದ್ವಿತೀಯ ಪಿಯು ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 41 ಮಂದಿ ಗೈರು
ಉಡುಪಿ : ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯು ವಿಜ್ಞಾನ ವಿಭಾಗದ ಗಣಿತ ಶಾಸ್ತ್ರ ಪರೀಕ್ಷೆಗೆ ಒಟ್ಟು 41 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಜಿಲ್ಲೆಯ 28 ಕೇಂದ್ರಗಳಲ್ಲಿ ನಡೆದ ಈ ಪರೀಕ್ಷೆಗೆ ಒಟ್ಟು ೫೩೨೪ ವಿದ್ಯಾರ್ಥಿ ಗಳು ನೊಂದಾಯಿಸಿಕೊಂಡಿದ್ದು, ಅವರ ಪೈಕಿ ೫೨೮೩ ಮಂದಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಗೈರು ಹಾಜರಾದ ೪೧ ಮಂದಿಯಲ್ಲಿ ೧೮ ಮುಸ್ಲಿಮ್ ವಿದ್ಯಾರ್ಥಿಗಳಿದ್ದಾರೆ. ಇವರಲ್ಲಿ ಯಾರು ಕೂಡ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣಕ್ಕೆ ವಾಪಾಸ್ಸಾಗಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ತಿಳಿಸಿದ್ದಾರೆ.
Next Story