ಬಿಜೆಪಿಯವರು ಮಾತ್ರವಲ್ಲ, ಪ್ರತಿಯೊಬ್ಬ ಭಾರತೀಯನು ದೇಶಭಕ್ತ: ಮಂಜುನಾಥ್ ಭಂಡಾರಿ
ಕುಂದಾಪುರ : ಜಾತಿಗಳ ಮಧ್ಯೆ, ಕೋಮುಗಳ ಮಧ್ಯೆ ಕಂದಕ ನಿರ್ಮಾಣ ಮಾಡಿ ಅದರಿಂದ ಲಾಭ ಪಡೆಯಲಾ ಗುತ್ತಿದೆ. ಬಿಜೆಪಿಯವರು ಮಾತ್ರ ದೇಶ ಭಕ್ತರಲ್ಲ. ಭಾರತದಲ್ಲಿ ಹುಟ್ಟಿದ ಪ್ರತಿಯೊಬ್ಬರು ದೇಶ ಭಕ್ತರು. ನಾವೇನು ಎದೆ ಬಗೆದು ರಾಷ್ಟ್ರ ಭಕ್ತಿ ಬಗ್ಗೆ ತೋರಿಸಲು ಆಗುವುದಿಲ್ಲ. ಕೋಮು ಭಾವನೆಗೆ ಜನರು ಬೆಲೆ ನೀಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ.
ಕುಂದಾಪುರ ತಾಲೂಕಿನ ಹೆಮ್ಮಾಡಿಯಲ್ಲಿಂದು ಸುದ್ದಿಗಾರರ ಜೊತೆ ಮಾತ ನಾಡಿದ ಅವರು, ಬಿಜೆಪಿ ಸರಕಾರ ಕಮಿಷನ್ ಸರಕಾರವಾಗಿದೆ. ಇಂತಹ ಕೆಲಸಕ್ಕೆ ಇಂತಿಷ್ಟು ಎಂಬ ದರಪಟ್ಟಿ ನಿಗದಿಪಡಿಸಿ ಕೆಲಸ ಮಾಡುತ್ತಿದ್ದಾರೆ. ಈ ಸರಕಾರ ದಿಂದ ಒಳಿತನ್ನು ಬಯಸಲು ಆಗಲ್ಲ ಎಂದರು.
ರಾಜ್ಯ ಬಿಜೆಪಿ ಸರಕಾರ ೪೦ ಪರ್ಸೆಂಟ್ ಕಮಿಷನ್ ಪಡೆಯುವ ಬಗ್ಗೆ ಕೆಂಪಣ್ಣ ಎನ್ನುವರು ಪ್ರಧಾನಿಯವರಿಗೆ ಪತ್ರ ಬರೆದು ವರ್ಷ ಕಳೆದಿದೆ. ಹಿಂದಿನ ಪ್ರಧಾನಿಯವರಿಗೆ ಮೌನ ಮುರಿಯಲ್ಲ ಎಂದು ಜನರು ಹೇಳುತ್ತಿದ್ದರು. ಆದರೆ ಪ್ರತಿಯೊಂದಕ್ಕೂ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದ ಈಗಿನ ಪ್ರಧಾನಿ ಯವರ ಮೌನದಿಂದ ಇರುವುದು ಅವರು ಪರೋಕ್ಷವಾಗಿ ಭ್ರಷ್ಟಾಚಾರಕ್ಕೆ ಒಪ್ಪಿದಂತಾಗುತ್ತದೆ ಎಂದು ಅವರು ಆರೋಪಿಸಿದರು.
ಈ ದೇಶದಲ್ಲಿ ೭೦ ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ೫೦ ಲಕ್ಷ ಕೋಟಿ ಸಾಲ ಮಾಡಿ ಅಭಿವೃದ್ಧಿ ಮಾಡಿತ್ತು. ಆದರೆ ಏಳು ವರ್ಷದಲ್ಲಿ ಕೇಂದ್ರ ಬಿಜೆಪಿ ಸರಕಾರ ೧೫೦ ಲಕ್ಷ ಕೋಟಿ ಸಾಲ ಮಾಡಿ ಯಾವುದೇ ಅಭಿವೃದ್ಧಿ ಮಾಡಲು ಆಗಿಲ್ಲ ಎಂದು ಅವರು ದೂರಿದರು.