ಯಶ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲಿಸಲು ಪಿಎಫ್‌ಐ ಒತ್ತಾಯ
ಉಡುಪಿ : ಹಿಜಾಬ್ ಹಕ್ಕಿಗಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯರ ಚಾರಿತ್ರ್ಯವಧೆ ನಡೆಸುತ್ತಿರುವ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಉಡುಪಿ ಜಿಲ್ಲಾಧ್ಯಕ್ಷ ಫಯಾಝ್ ಅಹ್ಮದ್ ಆಗ್ರಹಿಸಿದ್ದಾರೆ.
ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಕಾಲೇಜು ಕ್ಯಾಂಪಸ್‌ಗಳಲ್ಲಿ ಉದ್ವಿಗ್ನತೆ ಸೃಷ್ಟಿಸಿದ ಯಶ್ಪಾಲ್ ಸುವರ್ಣ, ಸಂತ್ರಸ್ತ ವಿದ್ಯಾರ್ಥಿನಿಯರ ವಿರುದ್ಧ ನಿರಂತರ ನಾಲಗೆ ಹರಿಯಬಿಡುತ್ತಿದ್ದಾರೆ. ಆತ ಸ್ವತಃ ಕ್ರಿಮಿನಲ್ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರೂ, ಈಗ ಮುಗ್ಧ ವಿದ್ಯಾರ್ಥಿ ಗಳನ್ನು ಭಯೋತ್ಪಾದಕರೆಂದು ಜರೆದು ಅವರಲ್ಲಿ ಭೀತಿ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಪೊಲೀಸ್ ಇಲಾಖೆ ಮೌನ ವಹಿಸಿರುವ ಕಾರಣದಿಂದಲೇ ಇಂತಹ ದ್ವೇಷಪೂರಿತ ಹೇಳಿಕೆಗಳು ಪುನರಾವರ್ತನೆಯಾಗುತ್ತಿವೆ ಎಂದು ಅವರು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
Next Story