Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಲ್ವರು ನೈರ್ಮಲ್ಯ ಕಾರ್ಮಿಕರ ಸಾವಿನ...

ನಾಲ್ವರು ನೈರ್ಮಲ್ಯ ಕಾರ್ಮಿಕರ ಸಾವಿನ ಪ್ರಕರಣ: ಎನ್‌ಎಚ್‌ಆರ್‌ಸಿಯಿಂದ ಹರ್ಯಾಣ ಸರಕಾರಕ್ಕೆ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ23 April 2022 10:33 PM IST
share
ನಾಲ್ವರು ನೈರ್ಮಲ್ಯ ಕಾರ್ಮಿಕರ ಸಾವಿನ ಪ್ರಕರಣ: ಎನ್‌ಎಚ್‌ಆರ್‌ಸಿಯಿಂದ ಹರ್ಯಾಣ ಸರಕಾರಕ್ಕೆ ನೋಟಿಸ್

ಹೊಸದಿಲ್ಲಿ,ಎ.23: ಹಿಸಾರ್ ಜಿಲ್ಲೆಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ನಾಲ್ವರು ನೈರ್ಮಲ್ಯ ಕಾರ್ಮಿಕರು ಸಾವನ್ನಪ್ಪಿದ ಘಟನೆಯ ಬಗ್ಗೆ ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ)ವು ಹರ್ಯಾಣದ ಮುಖ್ಯ ಕಾರ್ಯದರ್ಶಿಯವರಿಗೆ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.

  ಚರಂಡಿಗುಂಡಿಗಳಲ್ಲಿ ಸಾವನ್ನಪ್ಪುವಂತಹ ಘಟನೆಗಳನ್ನು ತಪ್ಪಿಸಲು ಸಾಧ್ಯವಿದೆಯಾದರೂ ಆ ಕೆಲಸದ ಬಗೆಗಿರುವ ತಿರಸ್ಕಾರದ ಭಾವನೆಯಿಂದಾಗಿ ಸುರಕ್ಷಿತ ಉಪಕರಣಗಳಿಲ್ಲದೆ ಶೌಚಗುಂಡಿಗಳನ್ನು ಅಪಾಯಕಾರಿಯಾದ ರೀತಿಯಲ್ಲಿ ಸ್ವಚ್ಛಗೊಳಿಸುವ ಪ್ರವೃತ್ತಿಯು ಮುಂದುವರಿದಿದೆಯೆಂದು ಎನ್‌ಎಚ್‌ಆರ್‌ಸಿ ಹೇಳಿಕೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದೆ.

ಕಾರ್ಮಿಕರಿಗೆ ಸಮರ್ಪಕವಾದ ಸುರಕ್ಷತಾ ಉಪಕರಣಗಳನ್ನು ಒದಗಿಸುವುದನ್ನು ಖಾತರಿಪಡಿಸಲು ಶೌಚಗುಂಡಿಗಳು, ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ವಚ್ತಗೊಳಿಸುವ ಕೆಲಸಗಳಿಗೆ ಯಂತ್ರಗಳ ಬಳಕೆಗೆ ಆಯೋಗವು ಒತ್ತು ನೀಡಿದೆಯಾದರೂ, ಇಂತಹ ಯಾತನಾಕಾರಿ ಘಟನೆಗಳು ಆಗಾಗ್ಗೆ ನಡೆಯುತ್ತಿರುತ್ತವೆ’’ ಎಂದು ಆಯೋಗವು ತನ್ನ ಹೇಳಿಕೆಯಲ್ಲಿ ಗಮನಸೆಳೆದಿದೆ.

  ಹಿಸಾರ್‌ನ ಬುದ್ಧ ಖೇರಾ ಗ್ರಾಮದಲ್ಲಿರುವ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ನಾಲ್ವರು ನೈರ್ಮಲ್ಯ ಕಾರ್ಮಿಕರು ವಿಷಾನಿಲ ಸೇವನೆಯಿಂದಾಗಿ ಮೃತಪಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯನ್ನು ಸ್ವಯಂಪ್ರೇರಿತವಾಗಿ ನೋಟಿಸ್ ಜಾರಿಗೊಳಿಸಿರುವುದಾಗಿ ಹೇಳಿದೆ.

 ಘಟನೆಯ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮವನ್ನು ಕೈಗೊಳ್ಳುವಂತೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ನೀಡಲಾದ ಪರಿಹಾರ ಕುರಿತಾದ ವಿವರಗಳನ್ನು ಒಳಗೊಂಡಂತೆ ಆರು ವಾರಗಳೊಳಗೆ ವರದಿಯನ್ನು ಸಲ್ಲಿಸುವಂತೆ ಆಯೋಗವು ರಾಜ್ಯದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಮಾಡಿದೆ.

‘‘ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ನಿರಾಸಕ್ತಿಯಿಂದಾಗಿ ಅಮೂಲ್ಯವಾದ ಮಾನವಜೀವಗಳು ಮತ್ತೊಮ್ಮೆ ನಷ್ಟವಾಗಿವೆ. ಅವರ ಮಾನವಹಕ್ಕುಗಳ ವ್ಯಾಪಕವಾಗಿ ಉಲ್ಲಂಘಿಸಲಾಗಿದೆ’’ ಎಂದು ಎನ್‌ಎಚ್‌ಆರ್‌ಸಿ ತಿಳಿಸಿದೆ.

 ಮೃತಪಟ್ಟ ಕಾರ್ಮಿಕರೆಲ್ಲರೂ 25ರಿಂದ 28 ವರ್ಷ ವಯೋಮಾನದೊಳಗಿನವರು. ಅಧಿಕಾರಿಗಳು ಸಮರ್ಪಕವಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುತ್ತಿದ್ದರೆ ಈ ಧಾರುಣ ಘಟನೆ ನಡೆಯುವುದನ್ನು ತಪ್ಪಿಸಬಹುದಿತ್ತು ಎಂದವರು ಹೇಳಿದ್ದಾರೆ.

 ‘‘ ಬಡ ಹಾಗೂ ಅಮಾಯಕ ಕಾರ್ಮಿಕರ ಮಾನವಹಕ್ಕುಗಳನ್ನು ನಾಗರಿಕ ಅಧಿಕಾರಿಗಳು ಉಲ್ಲಂಘಿಸುತ್ತಿರುವಂತಹ ಅಜಾಗರೂಕ ಪ್ರವೃತ್ತಿಯನ್ನು ಇಂತಹ ಘಟನೆಗಳು ತೋರಿಸಿಕೊಡುತ್ತವೆ’’ ಎಂದು ಎನ್‌ಎಚ್‌ಆರ್‌ಸಿ ಹೇಳಿಕೆ ತಿಳಿಸಿದೆ. ಶೌಚಗುಂಡಿಗಳನ್ನು ಸ್ವಚ್ಛಗೊಳಿಸುತ್ತಿದ್ದಾಗ ಕಾರ್ಮಿಕರು ಮೃತಪಟ್ಟ ಘಟನೆಗಳು ಅತ್ಯಂತ ಕಡಿಮೆ ಅವಧಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ನಡೆದಿವೆ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X