ಖಾಸಗಿ ಪಿಯು ಕಾಲೇಜು ಸ್ಥಾಪನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು, ಎ.23: ರಾಜ್ಯದಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಎ.27ರವರೆಗೆ ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ.
ಅರ್ಹ ಶಿಕ್ಷಣ ಸಂಸ್ಥೆಗಳು ಹಾಗೂ ಟ್ರಸ್ಟಿಗಳು ಅರ್ಜಿ ಸಲ್ಲಿಸಲು ಎ.12ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ಕೋರಿಕೆಯಿಂದ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ http://www.pue.karnataka.gov.in ವೆಬ್‍ಸೈಟ್‍ಗೆ ಸಂಪರ್ಕಿಸಬಹುದಾಗಿದೆ.
Next Story





