ಅಂಕಣಕಾರ ವಿಜಯ ಶಂಕರ್‌ಗೆ ‘ಅಕಲಂಕ’ ಪ್ರಶಸ್ತಿ

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದಿವಂಗತ ಡಾ.ಉಪ್ಪಂಗಳ ರಾಮಭಟ್ಟ ಅವರ ಹೆಸರಿನ ದತ್ತಿ ನಿಧಿಯಿಂದ ನೀಡುವ ‘ಅಕಲಂಕ ಪ್ರಶಸ್ತಿ’ಗೆ ಅಂಕಣಕಾ ಎಸ್.ಆರ್.ವಿಜಯಶಂಕರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಹಾಗೂ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ತಿಳಿಸಿದ್ದಾರೆ.
ವಿಜಯ ಶಂಕರ್ ಕನ್ನಡದ ಪ್ರಸಿದ್ಧ ಪತ್ರಿಕೆಗಳಲ್ಲಿ ಅಂಕಣ ಬರಹಗಾರರಾಗಿ, ಹಲವಾರು ಅಮೂಲ್ಯವಾದ ವಿಮರ್ಶಾ ಕೃತಿಗಳನ್ನು ಬರೆದಿದ್ದು, ಪ್ರಸ್ತುತ ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾಂತರ ಕೇಂದ್ರದ ಗೌರವ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಮೇ ತಿಂಗಳಲ್ಲಿ ಉಡುಪಿಯಲ್ಲಿ ನಡೆಯ ಲಿದ್ದು, ಪ್ರಶಸ್ತಿ ಪತ್ರ, ಫಲಕ ಹಾಗೂ 10,000 ಗೌರವಧನ ಒಳಗೊಂಡಿರುತ್ತದೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ ಮತ್ತು ನರೆಂದ್ರ ಕುಮಾರ್ ಕೋಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story