ಡಾ. ರಾಜ್ ಕುಮಾರ್ ಜನ್ಮದಿನ ಆಚರಣೆ

ಮಂಗಳೂರು : ವರನಟ, ನಟಸಾರ್ವಭೌಮ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕತ ಡಾ.ರಾಜ್ ಕುಮಾರ್‌ರ ಜನ್ಮ ದಿನಾಚರಣೆ ಕಾರ್ಯಕ್ರಮವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ.ಜಿಲ್ಲಾಡಳಿತ, ದ.ಕ.ಜಿಪಂ ಸಹಯೋಗದಲ್ಲಿ ವಾರ್ತಾ ಇಲಾಖೆ ಕಚೇರಿಯ ಸಭಾಂಗಣದಲ್ಲಿ ರವಿವಾರ ನಡೆಯಿತು.
ದ.ಕ.ಜಿಪಂ ಸಿಇಒ ಡಾ. ಕುಮಾರ್ ಗೌರವ ನಮನ ಸಲ್ಲಿಸಿದರು. ಕಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ್ ರೇವಣಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಮತ್ತಿತರರು ಉಪಸ್ಥಿತರಿದ್ದರು.
Next Story