ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಆರೋಪಿ ಸೌಮ್ಯಾ ವಶಕ್ಕೆ

ಸಾಂದರ್ಭಿಕ ಚಿತ್ರ
ಬೆಂಗಳೂರು: ಸಹಾಯಕ ಪ್ರಾಧ್ಯಾಪಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವ ಪ್ರಕರಣದಲ್ಲಿ ಆರೋಪಿ ಸೌಮ್ಯಾರನ್ನು ಪೊಲೀಸರು ಬಂಧಿಸಿದ್ದಾರೆ.
ಮಲ್ಲೇಶ್ವರಂ ಠಾಣೆ ಪೊಲೀಸರು ಮೈಸೂರಿನಿಂದ ಆರೋಪಿ ಸೌಮ್ಯಾರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆ ತಂದಿದ್ದಾರೆ.
ಪರೀಕ್ಷೆ ಮುನ್ನವೇ ಅಭ್ಯರ್ಥಿಗಳ ಮೊಬೈಲ್ನಲ್ಲಿ ಪ್ರಶ್ನೆಗಳು ಹರಿದಾಡಿವೆ ಎನ್ನಲಾದ ಸ್ಕ್ರೀನ್ ಶಾಟ್ ವೈರಲ್ ಆಗಿತ್ತು. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿತ್ತು.
20ಕ್ಕೂ ಹೆಚ್ಚು ಪ್ರಶ್ನೆಗಳು ಅಭ್ಯರ್ಥಿಯೊಬ್ಬನ ಮೊಬೈಲ್ನಲ್ಲಿ ನೋಡಿದ್ದಾಗಿ ಸ್ಪರ್ಧಾಕಾಂಕ್ಷಿ ಅಭ್ಯರ್ಥಿಗಳು ಕೂಡ ದೂರು ನೀಡಿದ್ದರು.
Next Story





