Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ.16ರಿಂದ ರಜತೋತ್ಸವ ವರ್ಷದ `ಬೆಂಗಳೂರು...

ನ.16ರಿಂದ ರಜತೋತ್ಸವ ವರ್ಷದ `ಬೆಂಗಳೂರು ತಂತ್ರಜ್ಞಾನ ಶೃಂಗ’ ಸಮಾವೇಶ: ಸಚಿವ ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ25 April 2022 7:13 PM IST
share
ನ.16ರಿಂದ ರಜತೋತ್ಸವ ವರ್ಷದ `ಬೆಂಗಳೂರು ತಂತ್ರಜ್ಞಾನ ಶೃಂಗ’ ಸಮಾವೇಶ: ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು, ಎ. 25: ‘ದೇಶದ ಹಾಗೂ ಏಷ್ಯಾದ ಮಹತ್ವದ ತಂತ್ರಜ್ಞಾನ ಕಾರ್ಯಕ್ರಮವಾದ `ಬೆಂಗಳೂರು ತಂತ್ರಜ್ಞಾನ ಶೃಂಗ’ದ 25ನೇ ಆವೃತ್ತಿಯನ್ನು ನ.16ರಿಂದ ಮೂರು ದಿನಗಳ ಕಾಲ ವಿಶೇಷವಾದ ರೀತಿಯಲ್ಲಿ ನಡೆಸಲು ಈಗಿನಿಂದಲೇ ಸಿದ್ಧತೆ ಆರಂಭಿಸಲಾಗಿದೆ' ಎಂದು ಐಟಿ-ಬಿಟಿ ಸಚಿವ ಡಾ.ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.

ಸೋಮವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ವಿವಿಧ ಕಂಪೆನಿಗಳ ಸಿಇಓಗಳು ಮತ್ತು ಇತರ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಈ ಬಾರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭೌತಿಕ ರೂಪದಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಶೃಂಗಕ್ಕೆ (ಬಿಟಿಎಸ್) ಈಗಾಗಲೇ ತಯಾರಿ ಆರಂಭವಾಗಿದೆ.

ಇದಕ್ಕೆ ಪೂರಕವಾಗಿ ಅಮೆರಿಕ, ಇಂಗ್ಲೆಂಡ್, ಜಪಾನ್ ಮುಂತಾದೆಡೆಗಳಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದು ಅವರು ತಿಳಿಸಿದರರು. ಬೆಳವಣಿಗೆ ತಂತ್ರಜ್ಞಾನ ಕ್ಷೇತ್ರವು ಅಗಾಧ ನೆರವು ನೀಡುತ್ತಿದೆ. ಪ್ರಧಾನಿ ಮೋದಿ ಘೋಷಿಸಿರುವ 5 ಟ್ರಿಲಿಯನ್ ಡಾಲರ್ ಮೌಲ್ಯದ ಆರ್ಥಿಕತೆಗೆ ಕರ್ನಾಟಕವು 1.5 ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಗುರಿ ಇಟ್ಟುಕೊಂಡಿದೆ' ಎಂದು ನುಡಿದರು.

‘ರಾಜ್ಯದ ಐಟಿ ಉದ್ಯಮದಲ್ಲಿ ಸದ್ಯಕ್ಕೆ 25 ಲಕ್ಷ ಮಂದಿ ಉದ್ಯೋಗಿಗಳಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಈ ವಲಯಕ್ಕೆ 55 ಲಕ್ಷ ನುರಿತ ಉದ್ಯೋಗಿಗಳ ಅಗತ್ಯವಿದೆ. ಇದನ್ನು ಪರಿಗಣಿಸಿ, ತಕ್ಕ ಯೋಜನೆಗಳನ್ನು ರೂಪಿಸಲಾಗುವುದು. ಜತೆಗೆ ಐಟಿ ಕ್ಷೇತ್ರದ ವಹಿವಾಟನ್ನು ಈ ಅವಧಿಯಲ್ಲಿ 300 ಬಿಲಿಯನ್ ಡಾಲರ್ ಮಟ್ಟಕ್ಕೆ ಬೆಳೆಸಲಾಗುವುದು' ಎಂದು ಅವರು ವಿವರಿಸಿದರು.

‘ಹಿಂದಿನ ಹಣಕಾಸು ವರ್ಷದಲ್ಲಿ ದೇಶಕ್ಕೆ ಹರಿದು ಬಂದಿರುವ ಒಟ್ಟು ವಿದೇಶೀ ಹೂಡಿಕೆಯಲ್ಲಿ ಶೇ.40ರಷ್ಟು ಪಾಲು ರಾಜ್ಯದಲ್ಲೇ ಹೂಡಿಕೆಯಾಗಿದ್ದು, ಇದರ ಮೊತ್ತವು 17.3 ಶತಕೋಟಿ ಡಾಲರುಗಳಷ್ಟಾಗಿದೆ. ಜತೆಗೆ, ರಾಜ್ಯವು ರಫ್ತು ವಹಿವಾಟಿನಲ್ಲೂ ದೇಶದಲ್ಲಿ ಅಗ್ರಸ್ಥಾನದಲ್ಲಿದ್ದು, 2021-22ರ ಮೊದಲ ಮೂರು ತ್ರೈಮಾಸಿಕ ಅವಧಿಗಳಲ್ಲಿ 91.4 ಶತಕೋಟಿ ಡಾಲರ್ ಮೊತ್ತದ ಸರಕು ಮತ್ತು ಸೇವೆಗಳನ್ನು ವಿದೇಶಗಳಿಗೆ ಪೂರೈಸಿದೆ' ಎಂದು ಅವರು ಮಾಹಿತಿ ನೀಡಿದರು.

ಇತ್ತೀಚೆಗೆ `ಕರ್ನಾಟಕ ಡೇಟಾ ಸೆಂಟರ್ ನೀತಿ-2022’ನ್ನು ಜಾರಿಗೆ ತರಲಾಗಿದ್ದು, ಮುಂದಿನ 5 ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ 10 ಸಾವಿರ ಕೋಟಿ ರೂ. ಬಂಡವಾಳವನ್ನು ಸೆಳೆಯಲಾಗುವುದು. ವೆಬ್ 3 ಮತ್ತು ಮೆಟಾವರ್ಸ್‍ಗೆ ಸಂಬಂಧಿಸಿದಂತೆ ಸಮರ್ಪಕ ನೀತಿ ಜಾರಿಗೆ ತರಲಾಗುವುದು. ಅಂತಿಮವಾಗಿ, ತಂತ್ರಜ್ಞಾನದ ಲಾಭವು ಗ್ರಾಮೀಣ ಪ್ರದೇಶದ ಜನರನ್ನು ತಲುಪಬೇಕು' ಎಂದು ಅಶ್ವತ್ಥ ನಾರಾಯಣ ಪ್ರತಿಪಾದಿಸಿದರು.

`ಬಿಯಾಂಡ್ ಬೆಂಗಳೂರು’ ಉಪಕ್ರಮದಡಿ ಮೈಸೂರಿನಲ್ಲಿ ಸೈಬರ್ ಸೆಕ್ಯುರಿಟಿಗೆ, ಹುಬ್ಬಳ್ಳಿಯಲ್ಲಿ ಇಎಸ್ ಡಿಎಂ ಮತ್ತು ಕೃತಕ ಬುದ್ಧಿಮತ್ತೆ ಆಧರಿತ ಉದ್ದಿಮೆಗಳಿಗೆ, ಮಂಗಳೂರಿನಲ್ಲಿ ಫಿನ್-ಟೆಕ್ ವಲಯಕ್ಕೆ ಮತ್ತು ಬೆಳಗಾವಿಯಲ್ಲಿ ಏರೋಸ್ಪೇಸ್ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ. ಇವೆಲ್ಲವೂ ಸುಗಮವಾಗಿ ನಡೆಯಬೇಕೆಂಬ ಉದ್ದೇಶದಿಂದ `ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್’ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.

ಸಿಇಒಗಳ ಜೊತೆ ಬೆಳಗ್ಗೆ ನಡೆಸಿದ ಸಭೆಯಲ್ಲಿ, ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಜಾರಿಗೆ ತಂದಿರುವ ಕಡ್ಡಾಯ 30 ವಾರಗಳ ಇಂಟರ್ನ್‍ಶಿಪ್ ಅನ್ನು ಕಾರ್ಯಾನುಷ್ಠಾನಕ್ಕೆ ತರಲು ಉದ್ದಿಮೆಗಳ ಪೂರ್ಣ ಸಹಕಾರ ಕೋರಲಾಗಿದೆ ಎಂದರು. ಐಟಿ ವಿಷನ್ ಗ್ರೂಪ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ಸ್ಟಾರ್ಟ್‍ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು, ವಿದ್ಯುನ್ಮಾನ ಹಾಗೂ ಐಟಿ-ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ನಿರ್ದೇಶಕಿ ಸಿ.ಎನ್.ಮೀನಾ ನಾಗರಾಜ್,  ಜೈವಿಕ ತಂತ್ರಜ್ಞಾನ ಉದ್ಯಮಗಳ ಒಕ್ಕೂಟದ ಅಧ್ಯಕ್ಷ ಜಿ.ಎಸ್.ಕೃಷ್ಣನ್, ಭಾರತೀಯ ಸಾಫ್ಟ್‍ವೇರ್ ಪಾರ್ಕ್‍ಗಳ ಅಧ್ಯಕ್ಷ ಶೈಲೇಂದ್ರಕುಮಾರ್ ತ್ಯಾಗಿ, ಜಗದೀಶ್ ಪಟಣ್ಕರ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X