ಸಕಲೇಶಪುರ: ಫಾಲ್ಸ್ ಗೆ ಬಿದ್ದು ಇಬ್ಬರು ಯುವಕರು ಮೃತ್ಯು

ಮೂಕನ ಮನೆ ಜಾಲಪಾತ
ಸಕಲೇಶಪುರ: ಏ.25: ತಾಲುಕಿನ ಹೆತ್ತೂರು ಹೋಬಳಿಯ ಮೂಕನ ಮನೆ ಜಲಪಾತದಲ್ಲಿ ಇಬ್ಬರು ಕೂಲಿ ಕಾರ್ಮಿಕರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಕೊಡ್ಲಿಪೇಟೆ ಮೂಲದ ಕೂಲಿ ಕೆಲಸ ನಿರ್ವಹಿಸುತ್ತಿದ್ದ ಕಿಶೋರ್( 29) ಮತ್ತು ಕುಮಾರ್(38) ಮೂಕನಮನೆ ಫಾಲ್ಸ್ ಗೆ ಬಂದಿದ್ದರು. ನೀರಿನಲ್ಲಿ ಈಜಾಡಿ ನಂತರ ಕಲ್ಲಿನ ಬಂಡೆ ಮೇಲೆ ನಿಂತು ಸೆಲ್ಪಿ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ಜಲಪಾತಕ್ಕೆ ಬಿದ್ದದ್ದಾರೆ ಎನ್ನಲಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ ಎನ್ನಲಾಗಿದೆ.
ತಾಲೂಕು ಅಗ್ನಿಶಾಮಕದಳದ ನೀರಿಕ್ಷಕರಾದ ರಾಜು ನೇತೃತ್ವದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಸೋಮವಾರ ಸಂಜೆ ವೇಳೆ ಮೃತದೇಹಗಳನ್ನು ನೀರಿನಿಂದ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಥಳಕ್ಕೆ ಸ್ಥಳಿಯ ಯಸಳೂರು ಪೋಲಿಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಬ್ಯಾಟರಾಯಗೌಡ ರವರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಕಾರ್ಫಡ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಯಸಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







