ದ್ವಿತೀಯ ಪಿಯು ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 213 ವಿದ್ಯಾರ್ಥಿಗಳು ಗೈರು
ಉಡುಪಿ, ಎ.24: ಇಂದಿನ ದ್ವಿತೀಯ ಪಿಯು ಕಲಾ ಹಾಗೂ ವಾಣಿಜ್ಯ ವಿಭಾಗದ ಅರ್ಥಶಾಸ್ತ್ರ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 213 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.ಜಿಲ್ಲೆಯ 28 ಕೇಂದ್ರಗಳಲ್ಲಿ ನಡೆದ ಈ ಪರೀಕ್ಷೆಗೆ ಒಟ್ಟು 9184 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಅವರ ಪೈಕಿ 8971 ಮಂದಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ ಎಂದು ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ತಿಳಿಸಿದ್ದಾರೆ.
ಹಿಜಾಬ್ ಹಕ್ಕಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿದ್ಯಾರ್ಥಿನಿಗಳಾದ ಆಲಿಯಾ ಅಸ್ಸಾದಿ ಹಾಗೂ ರೇಶಮ್ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಅದೇ ರೀತಿ ಇದೇ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಕೇಂದ್ರದಲ್ಲಿ ಒಟ್ಟು 34 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
Next Story





