Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೈಸ್‍ಗೆ ಹೆಚ್ಚುವರಿಯಾಗಿ ನೀಡಿರುವ 543...

ನೈಸ್‍ಗೆ ಹೆಚ್ಚುವರಿಯಾಗಿ ನೀಡಿರುವ 543 ಎಕರೆ ಭೂಮಿ ವಾಪಸ್: ಸಚಿವ ಎಸ್.ಟಿ.ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ25 April 2022 9:49 PM IST
share
ನೈಸ್‍ಗೆ ಹೆಚ್ಚುವರಿಯಾಗಿ ನೀಡಿರುವ 543 ಎಕರೆ ಭೂಮಿ ವಾಪಸ್: ಸಚಿವ ಎಸ್.ಟಿ.ಸೋಮಶೇಖರ್

ಬೆಂಗಳೂರು, ಎ.25: ನೈಸ್‍ಗೆ ಹೆಚ್ಚುವರಿಯಾಗಿ ನೀಡಿರುವ 543 ಎಕರೆ ಭೂಮಿಯನ್ನು ವಾಪಸ್ ಪಡೆಯಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. 

ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ನೈಸ್ ಸಂಸ್ಥೆ ಅವರು 1,600 ಎಕರೆಯಷ್ಟು ಭೂಮಿಯನ್ನು ವಶಪಡಿಸಿಕೊಂಡು ಟೌನ್ ಶಿಪ್ ಮಾಡುತ್ತಿದ್ದಾರೆ. ಇದು ಕಾನೂನುಬಾಹಿರ ಆಗಿದೆ. ಒಂದು ಎಕರೆಗೆ 1 ಕೋಟಿ 60 ರೂ. ಜೊತೆಗೆ 60*40 ಸೈಟ್ ನೀಡಬೇಕು. ಭೂಮಿ ವಶಪಡಿಸಿಕೊಂಡು 20 ವರ್ಷ ಆಗಿದೆ. ಇದರಿಂದ ರೈತರಿಗೆ ಅನ್ಯಾಯ ಆಗಿದೆ ಎಂದು ತಿಳಿಸಿದರು.

ಈ ಹಿಂದೆ ನಿಗದಿಯಾದ 40 ಲಕ್ಷ ಪರಿಹಾರಕ್ಕೆ ರೈತರು ಒಪ್ಪಿಲ್ಲ. ಇದಕ್ಕೆ ನೈಸ್ ಸಂಸ್ಥೆ ಒಪ್ಪದಿದ್ದರೆ ಭೂಮಿಯನ್ನು ರೈತರಿಗೆ ವಾಪಸ್ ನೀಡಲಾಗುವುದು. ಇಲ್ಲವೆ ಸರಕಾರದ ವಶಕ್ಕೆ ಪಡೆಯಲಾಗುವುದು ಎಂದು ಹೇಳಿದರು.

ಹೆಚ್‍ಡಿಕೆಗೆ ತಿರುಗೇಟು ನೀಡಿದ ಸೋಮಶೇಖರ್: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬಮೂಲ್ ನೇಮಕಾತಿಯಲ್ಲಿ ಎಲ್ಲ ಹದಿನಾಲ್ಕು ಯೂನಿಯನ್‍ಗಳಲ್ಲೂ ಅಕ್ರಮ ನಡೆದಿದೆ ಎಂದು ದೂರು ಕೊಟ್ಟಿದ್ದಾರೆ. ಎಲ್ಲ ಕಡೆ ಅಕ್ರಮದ ದೂರು ನೀಡಿದರೆ ಹೇಗೆ? ಎಂದು ಹೆಚ್‍ಡಿಕೆಗೆ ತಿರುಗೇಟು ನೀಡಿದರು. ಕುಮಾರಸ್ವಾಮಿ ಅವರ ಸಹೋದರ ಹೆಚ್.ಡಿ. ರೇವಣ್ಣ ಕೆಎಂಎಫ್ ಅಧ್ಯಕ್ಷ ಆಗಿರಲಿಲ್ವಾ?. ಬಂಡೆಪ್ಪ ಕಾಶೆಂಪೂರ್ ಆಗ ಸಹಕಾರ ಸಚಿವರಾಗಿರಲ್ವಾ?. ಆರೋಪ ಮಾಡಬೇಕಾದರೆ ದಾಖಲೆ ಇಟ್ಟು ಮಾಡಬೇಕು. ಬಹುಶಃ ಇವರು ಸಿಎಂ ಆದ ಅವಧಿಯಲ್ಲಿ ಅಕ್ರಮ ಆಗಿದೆ ಅನಿಸುತ್ತದೆ. ಹೀಗಾಗಿ ಆರೋಪ ಮಾಡಿದ್ದಾರೆ ಎಂದು ಹೇಳಿದರು.

ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಪೊಲಿಸ್ ನೋಟಿಸ್ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಸಚಿವರು, ಸಿಎಂ ಬಸವರಾಜ್ ಬೊಮ್ಮಾಯಿ ಇದನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ್ದಾರೆ. ಯಾರು ಎಷ್ಟೇ  ದೊಡ್ಡ ಮನುಷ್ಯರಾಗಿರಲಿ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಯಾರಿಗೂ ಅನ್ಯಾಯವಾಗಬಾರದು. ಪ್ರಿಯಾಂಕ್ ಖರ್ಗೆ ಸಿಡಿ ಬಿಡುಗಡೆ ಮಾಡಿದ್ದರು. ಹಾಗಾಗಿ  ಪೊಲೀಸರು ಇದು ಎಲ್ಲಿಂದ ಬಂತು ಅಂತಾ ಕೇಳಿದ್ದಾರೆ. ಇದಕ್ಕೆ ಪ್ರಿಯಾಂಕ್ ಖರ್ಗೆ ಸಹಕಾರ ಕೊಡಬೇಕು. ಆಗ ಇದಕ್ಕೆ ಪರಿಹಾರ ಸಿಕ್ಕಂತಾಗಲಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X