Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಡಬ: ಅಪರೂಪದ ಬೃಹತ್ ಶಿಲಾಯುಗದ ಗುಹಾ...

ಕಡಬ: ಅಪರೂಪದ ಬೃಹತ್ ಶಿಲಾಯುಗದ ಗುಹಾ ಸಮಾಧಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ25 April 2022 10:48 PM IST
share
ಕಡಬ: ಅಪರೂಪದ ಬೃಹತ್ ಶಿಲಾಯುಗದ ಗುಹಾ ಸಮಾಧಿ ಪತ್ತೆ

ಕಡಬ: ಅಪರೂಪದ ಬೃಹತ್ ಶಿಲಾಯುಗದ ಗುಹಾ ಸಮಾಧಿಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಕಂಡು ಬಂದಿದೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಟಿ. ಮುರುಗೇಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುಹಾ ಸಮಾಧಿಗಳು, ಬೃಹತ್ ಶಿಲಾಯುಗ ಕಾಲದಲ್ಲಿ ರಚಿಸಲಾದ ಸಮಾಧಿಗಳಾಗಿದ್ದು, ಸಮಾಧಿಯ ಮಧ್ಯಭಾಗದಲ್ಲಿ ಸುಮಾರು ಎರಡರಿಂದ ಮೂರು ಅಡಿ ವ್ಯಾಸದ ರಂಧ್ರವನ್ನು ಸುಮಾರು ಒಂದು ಮೀಟರ್ ಆಳದವರೆಗೆ ಸಿಲಿಂಡರ್ ಆಕಾರದಲ್ಲಿ ಕೆಂಪು ಮುರಕಲ್ಲಿನ ಭೂಪಾತಳಿಯಲ್ಲಿ ಕೊರೆಯಲಾಗಿದೆ. ಇದರ ಕೆಳಭಾಗದಲ್ಲಿ ಅರ್ಧಗೋಳಾಕೃತಿಯ ಗುಹೆಯನ್ನು ಅಗತ್ಯವಾದ ಆಳ ಹಾಗೂ ಸುತ್ತಳತೆಯೊಂದಿಗೆ ಅಗೆದು ರಚಿಸಲಾಗಿದ್ದು, ಇದು ಬಹುತೇಕ ಬೌದ್ಧ ಧರ್ಮದ ಸ್ಥೂಪಗಳ ರಚನೆಯನ್ನು ಹೋಲುತ್ತದೆ. ಕರ್ನಾಟಕದ ಕರಾವಳಿಯಲ್ಲಿ ಇಂತಹ ರಚನೆಗಳು ಸಾಮಾನ್ಯವಾಗಿ ಕಂಡು ಬರುತ್ತವೆಯಾದರೂ ಕೇರಳದಲ್ಲಿ, ಗುಹಾ ಸಮಾಧಿಗಳ ಪಾಶ್ರ್ವದಲ್ಲಿ ಒಂದು ಪ್ರವೇಶದ್ವಾರ ಇರುತ್ತದೆ. ಈ ಪ್ರವೇಶದ್ವಾರವನ್ನು ಆಯತಾಕಾರದಲ್ಲಿ ಬಾಗಿಲ ದಾರಂದಂತೆ ರಚಿಸಲಾಗಿರುತ್ತದೆ. ಆದರೆ, ಎರಡೂ ಕಡೆ ಸಮಾಧಿಯ ಮಧ್ಯಭಾಗದಲ್ಲಿ ಎರಡು ಅಥವಾ ಮೂರು ಅಡಿಯ ವ್ಯಾಸದ ರಂಧ್ರ ಸಾಮಾನ್ಯವಾಗಿ ಕಂಡು ಬರುತ್ತದೆ. 

ಸಾಮಾನ್ಯವಾಗಿ, ಬೃಹತ್ ಶಿಲಾಯುಗದ ಸಮಾಧಿಗಳ ಇರುವನ್ನು ಗುರುತಿಸಲು, ಆ ಕಾಲದಲ್ಲಿ ಸಮಾಧಿಯ ಮೇಲೆ ಅಥವಾ ಸಮಾಧಿಯ ಸಮೀಪದಲ್ಲಿ, ದೊಡ್ಡ, ದೊಡ್ಡ ಕಲ್ಲಿನ ಕಂಭಗಳನ್ನು ನಿಲ್ಲಿಸುತ್ತಿದ್ದರು, ಇಲ್ಲವೇ, ಸಮಾಧಿಯ ಮೇಲ್ಭಾಗದಲ್ಲಿ ದೊಡ್ಡ, ದೊಡ್ಡ ಕಾಡು ಕಲ್ಲುಗಳ ಶಿಲಾ ವರ್ತುಲವನ್ನು ರಚಿಸುತ್ತಿದ್ದರು, ಕೆಲವು ಕಡೆ ಸಮಾಧಿಯ ಮೇಲೆ ಕಲ್ಲುಗಳ ರಾಶಿಯನ್ನು ಹೇರಿ, ಕಲ್ಗುಪ್ಪೆಗಳನ್ನು ನಿರ್ಮಿಸಿ ಸಮಾಧಿಗಳ ಇರುವನ್ನು ನಿರ್ದೇಶಿಸಲಾಗಿದೆ. ಆದರೆ, ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ಒಂದು ದೊಡ್ಡ ವೃತ್ತವನ್ನು ಕೆಂಪು ಮುರಕಲ್ಲಿನ ಮೇಲೆ ರಚಿಸಿ, ಸಮಾಧಿಯ ಇರುವನ್ನು ಗುರುತಿಸಿರುವುದು ಕಡಬದ ಗುಹಾ ಸಮಾಧಿಯ ವಿಶೇಷತೆಯಾಗಿದೆ.

ಆ ವೃತ್ತದ ಕೆಳಭಾಗದಲ್ಲಿ ಆ ವೃತ್ತದ ವಿಸ್ತಾರಕ್ಕೆ ಅನುಗುಣವಾಗಿ ಗುಹೆಯನ್ನು ರಚಿಸಲಾಗಿದೆ. ಆ ವೃತ್ತದ ವಿಸ್ತಾರ ಸುಮಾರು ಏಳು ಅಡಿಯಾಗಿದ್ದು, ಕೆಳಗಿನ ಗುಹೆಯೂ ಏಳು ಅಡಿ ವಿಸ್ತಾರವಾಗಿದೆ. ಕೇರಳ ಮತ್ತು ಕರ್ನಾಟಕದ ಗುಹಾ ಸಮಾಧಿಗಳಲ್ಲಿ ಸಾಮಾನ್ಯವಾಗಿ ಕಂಡು ಬರುವ ರಂಧ್ರ, ಕಡಬದ ಗುಹಾ ಸಮಾಧಿಯಲ್ಲಿಲ್ಲ. ಆದ್ದರಿಂದ, ಕಡಬದ ಸಮಾಧಿ ಒಂದು ಅಪರೂಪದ ಹೊಸ ಮಾದರಿಯಾಗಿದೆ. ಗುಹೆಯ ಮಧ್ಯಭಾಗದಲ್ಲಿ ಅಗ್ನಿಕುಂಡವನ್ನು ಹೋಲುವ ಒಂದು ಗುಂಡಿ ಕಂಡು ಬಂದಿದ್ದು, ಇದೂ ಸಹ ಒಂದು ವಿಶೇಷ ಅಂಶವಾಗಿದೆ. ಗುಹೆಯ ಒಳಭಾಗದಲ್ಲಿ ಅತ್ಯಲ್ಪ ಪ್ರಮಾಣದ ಕೆಂಪು, ಕಪ್ಪು ಮತ್ತು ಕೆಂಪು ಬಣ್ಣದ ಮಡಕೆಯ ಚಿಕ್ಕ, ಚಿಕ್ಕ ಚೂರುಗಳು ಕಂಡು ಬಂದಿವೆ. ಬಹುಶಃ ಸಮಾಧಿಯ ಅವಶೇಷಗಳನ್ನು ನಿಧಿಗಳ್ಳರು ದೋಚಿರುವಂತೆ ಕಂಡು ಬರುತ್ತದೆ. ಈ ಸಮಾಧಿ ಅಧ್ಯಯನದ ಸಂದರ್ಭದಲ್ಲಿ ನಿಶ್ಚಿತ್ ಗೋಳಿತ್ತಡಿ, ನ್ಯಾಷನಲ್ ಗೋಲ್ಡ್ ಮತ್ತು ಡೈಮಂಡ್ ನ ಮಾಲೀಕರಾದ ಯೂಸೂಫ್ ಹೈದರ್ ಹಾಗೂ ಈ ಸಮಾಧಿಯನ್ನು ಬೆಳಕಿಗೆ ತರುವಲ್ಲಿ ವಿದ್ಯಾರ್ಥಿಗಳಾದ ಶ್ರೇಯಸ್, ಗೌತಮ್, ಶಾರೀಕ್, ಕಾರ್ತಿಕ್, ವಿಶಾಲ್ ರೈ ಮತ್ತು ದಿಶಾಂತ್ ಸಹಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X