ದೇಶದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ: ಎ.27ರಂದು ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ವೀಡಿಯೊ ಕಾನ್ಫರೆನ್ಸ್
ಮಂಗಳೂರಿನಿಂದ ಸಭೆಯಲ್ಲಿ ಭಾಗಿಯಾಗಲಿರುವ ಸಿಎಂ ಬೊಮ್ಮಾಯಿ

ಬೆಂಗಳೂರು, ಎ.26: ದೇಶದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎ.27ರಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವುದರಿಂದ ಅವರು ಮಂಗಳೂರಿನಿಂದಲೇ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗಲಿದ್ದಾರೆ.
ಮುಖ್ಯಮಂತ್ರಿಯ ವೀಡಿಯೋ ಕಾನ್ಫರೆನ್ಸ್ ಗಾಗಿ ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ
ಬುಧವಾರ ದ.ಕ. ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
Next Story





