ದ್ವಿತೀಯ ಪಿಯು ಪರೀಕ್ಷೆ: ದ.ಕ.ಜಿಲ್ಲೆಯಲ್ಲಿ 113 ವಿದ್ಯಾರ್ಥಿಗಳು ಗೈರು
ಮಂಗಳೂರು, ಎ.26: ದ.ಕ. ಜಿಲ್ಲೆಯಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳಲ್ಲಿ ಒಟ್ಟು 113 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಜಿಲ್ಲೆಯ 51 ಕೇಂದ್ರಗಳಲ್ಲಿ ರಸಾಯನ ಶಾಸ್ತ್ರ ಪರೀಕ್ಷೆಗೆ 11,904 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಆ ಪೈಕಿ 11,807 ವಿದ್ಯಾರ್ಥಿಗಳು ಹಾಜರಾಗಿದ್ದು, 97 ಮಂದಿ ಗೈರಾಗಿದ್ದಾರೆ. ಮನಶಾಸ್ತ್ರ ಪರೀಕ್ಷೆಗೆ 311 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಈ ಪೈಕಿ 301 ವಿದ್ಯಾರ್ಥಿಗಳು ಹಾಜರಾಗಿದ್ದು, 10 ಮಂದಿ ಗೈರಾಗಿದ್ದಾರೆ. ಮೂಲಗಣಿತ ಪರೀಕ್ಷೆಗೆ 624 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಆ ಪೈಕಿ 618 ವಿದ್ಯಾರ್ಥಿಗಳು ಹಾಜರಾಗಿದ್ದು, 6 ಮಂದಿ ಗೈರಾಗಿದ್ದಾರೆ ಎಂದು ಡಿಡಿಪಿಯು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story