Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ:...

ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ: ಗೃಹ ಸಚಿವರನ್ನು ವಜಾ ಗೊಳಿಸಲು ರಾಜ್ಯಪಾಲರಿಗೆ ಆಪ್ ಮನವಿ

ವಾರ್ತಾಭಾರತಿವಾರ್ತಾಭಾರತಿ26 April 2022 4:57 PM IST
share
ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ: ಗೃಹ ಸಚಿವರನ್ನು ವಜಾ ಗೊಳಿಸಲು ರಾಜ್ಯಪಾಲರಿಗೆ ಆಪ್ ಮನವಿ

ಬೆಂಗಳೂರು: ಪಿಎಸ್‌ಐ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿ ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮನವಿ ಮಾಡಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರರವರನ್ನು ಸಚಿವ ಸಂಪುಟದಿಂದ ವಜಾ ಮಾಡಲು ಆಗ್ರಹಿಸಿದರು. ನಿಯೋಗದಲ್ಲಿ ಪಕ್ಷದ ಹಿರಿಯ ಮುಖಂಡ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್  ಹಾಗೂ ಪಕ್ಷದ ಅನೇಕ ಮುಖಂಡರುಗಳು ಇದ್ದರು.

ರಾಜಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ರವರನ್ನು ಮಂಗಳವಾರ ಭೇಟಿ ಮಾಡಿದ ಪೃಥ್ವಿ ರೆಡ್ಡಿಯವರು ಮೂರು ಆಗ್ರಹಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿದರು. ಇವುಗಳನ್ನು ಶೀಘ್ರ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಮನವಿ ಮಾಡಿದರು.

ಮೊದಲನೆಯದಾಗಿ, ರಾಜ್ಯದ  52,000 ಅಭ್ಯರ್ಥಿಗಳು ಪಿಎಸ್‌ಐ ಪರೀಕ್ಷೆ ಬರೆದಿದ್ದಾರೆ. ಈಗ ಅಕ್ರಮ ಬಯಲಾಗಿರುವ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳನ್ನು ಕಾಯಿಸದೇ ಶೀಘ್ರವೇ ಮರುಪರೀಕ್ಷೆ ನಡೆಸಬೇಕಾದ ಅವಶ್ಯಕತೆಯಿದೆ. ಇದಕ್ಕಾಗಿ ನೂತನ ಪ್ರಾಧಿಕಾರ ರಚಿಸಿ ಪಾರದರ್ಶಕವಾಗಿ ಪರೀಕ್ಷಾ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಪೃಥ್ವಿ ರೆಡ್ಡಿ ಮನವಿ ಮಾಡಿದರು.

ಎರಡನೆಯದಾಗಿ, ಪಿಎಸ್‌ಐ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿ ಪ್ರಸ್ತುತ ನಡೆಯುತ್ತಿರುವ ಸಿಐಡಿ ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿದೆ. ಅಲ್ಲದೇ, ರಾಜ್ಯ ಸರ್ಕಾರವು ತನ್ನ ಪ್ರಭಾವ ಬಳಸಿ ತನಿಖೆಯು ವಿಳಂಬವಾಗುವಂತೆ ಮಾಡುವ ಸಾಧ್ಯತೆಯಿದೆ. ಆದ್ದರಿಂದ ತನಿಖೆಗೆ ಕಾಲಮಿತಿ ನಿಗದಿಪಡಿಸಬೇಕು. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ, ಆರೋಪಪಟ್ಟಿ ಸಲ್ಲಿಸಬೇಕು. ಈ ಕುರಿತು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಪೃಥ್ವಿ ರೆಡ್ಡಿ  ಮನವಿ ಮಾಡಿದರು.

ಮೂರನೇಯದಾಗಿ, ರಾಜ್ಯ ಸಚಿವ ಸಂಪುಟದಲ್ಲಿ ಗೃಹ ಇಲಾಖೆಯು ಅತ್ಯಂತ ಸೂಕ್ಷ್ಮವಾದ ಇಲಾಖೆಯಾಗಿದೆ. ಹಾಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಸಾಮರ್ಥ್ಯ ಹಾಗೂ ಅನುಭವದ ಕೊರತೆಯಿರುವುದು ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಿಂದಲೂ ಸಾಬೀತಾಗುತ್ತಿದೆ. ಆದ್ದರಿಂದ ಕೂಡಲೇ ಅವರನ್ನು ವಜಾ ಮಾಡಿ ಸಮರ್ಥರನ್ನು ಗೃಹ ಸಚಿವ ಸ್ಥಾನಕ್ಕೆ ನೇಮಿಸಬೇಕು. ಈ ಕುರಿತು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಭಾಸ್ಕರ್ ರಾವ್  ಮನವಿ ಮಾಡಿದರು.

ಆಮ್‌ ಆದ್ಮಿ ಪಾರ್ಟಿಯ ಮುಖಂಡರಾದ ನಾಗಣ್ಣ ಗೌಡ, ಚನ್ನಪ್ಪಗೌಡ ನೆಲ್ಲೂರು ಹಾಗೂ ಜಗದೀಶ್ ಚಂದ್ರರವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X