Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೀರಾ ಸಣ್ಣ ವಯಸ್ಸಿನಲ್ಲಿ ಮಕ್ಕಳನ್ನು...

ತೀರಾ ಸಣ್ಣ ವಯಸ್ಸಿನಲ್ಲಿ ಮಕ್ಕಳನ್ನು ಶಾಲೆಗೆ ಸೇರಿಸಬಾರದು ಎಂದ ಸುಪ್ರೀಂಕೋರ್ಟ್:‌ ಕಾರಣವೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ26 April 2022 5:22 PM IST
share
ತೀರಾ ಸಣ್ಣ ವಯಸ್ಸಿನಲ್ಲಿ ಮಕ್ಕಳನ್ನು ಶಾಲೆಗೆ ಸೇರಿಸಬಾರದು ಎಂದ ಸುಪ್ರೀಂಕೋರ್ಟ್:‌ ಕಾರಣವೇನು ಗೊತ್ತೇ?

 ಹೊಸದಿಲ್ಲಿ: ಮಕ್ಕಳ ಮಾನಸಿಕ ಆರೋಗ್ಯದ ದೃಷ್ಟಿಯಿಂದ ಅವರನ್ನು ತೀರಾ ಸಣ್ಣ ವಯಸ್ಸಿನಲ್ಲಿಯೇ ಶಾಲೆಗಳಿಗೆ ಕಳುಹಿಸಬಾರದು ಎಂದು ಸುಪ್ರೀಂ ಕೋರ್ಟ್‌ ಇಂದು ಅಭಿಪ್ರಾಯ ಪಟ್ಟಿದೆ.

ʻʻಮಕ್ಕಳನ್ನು ಎರಡು ವರ್ಷದವರಿರುವಾಗಲೇ ಶಾಲೆಗೆ ಕಳುಹಿಸುವ ಆತುರ ಹೆತ್ತವರಲ್ಲಿದೆ. ಇದು ಅವರ ಮಾನಸಿಕ ಆರೋಗ್ಯಕ್ಕೆ ಉತ್ತಮವಲ್ಲ,ʼʼ ಎಂದು ಜಸ್ಟಿಸ್‌ ಸಂಜಯ್‌ ಕಿಶನ್‌ ಮತ್ತು ಜಸ್ಟಿಸ್‌ ಎಂ ಎಂ ಸುಂದರೇಶ್‌ ಅವರ ಪೀಠ ಹೇಳಿದೆ.

ಮುಂಬರುವ ಶೈಕ್ಷಣಿಕ ವರ್ಷದಿಂದ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಬೇಕಾದರೆ  ಅವರಿಗೆ ಆರು ವರ್ಷ ತುಂಬಿರಬೇಕು ಎಂದು   ಕೇಂದ್ರೀಯ ವಿದ್ಯಾಲಯ ಹೊರತಂದಿರುವ ನಿಯಮವನ್ನು ಪ್ರಶ್ನಿಸಿ ಹೆತ್ತವರ ಗುಂಪೊಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಮೇಲಿನಂತೆ ಹೇಳಿದೆ.

ಎಪ್ರಿಲ್‌ 11ರ ದಿಲ್ಲಿ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿದ ಅರ್ಜಿದಾರರು, ಮಾರ್ಚ್‌ 2022ರಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳಲು ನಾಲ್ಕು ದಿನಗಳಿವೆ ಎನ್ನುವಾಗ ಪ್ರವೇಶಾತಿ ನಿಯಮಗಳನ್ನು ಕೇಂದ್ರೀಯ ವಿದ್ಯಾಲಯ ಸಂಘಟನ್‌ ಏಕಾಏಕಿ ಬದಲಾಯಿಸಿತ್ತು ಎಂದು ಅವರು ಹೇಳಿದ್ದಾರೆ. ಇದಕ್ಕೂ ಹಿಂದಿನ ನಿಯಮದಂತೆ ಐದು ವರ್ಷ ತುಂಬಿದ ಮಕ್ಕಳು ಒಂದನೇ ತರಗತಿಗೆ ದಾಖಲಾತಿ ಪಡೆಯಬಹುದಾಗಿತ್ತು.

ಅರ್ಜಿದಾರರ ವಾದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್‌, ʻʻ ಮಗುವೊಂದನ್ನು ಶಾಲೆಗೆ ಸೇರಿಸುವ ಸರಿಯಾದ ವಯಸ್ಸು ಇದೆ ಎಂಬುದಕ್ಕೆ ಪುರಾವೆಯಾಗಿ ಅಧ್ಯಯನಗಳು ಇವೆ. ಮಕ್ಕಳ ಮೇಲೆ ಹೆಚ್ಚು ಒತ್ತಡ ಹೇರಬೇಡಿ, ಇದು ಅವರ ವಿಷಯ ಗ್ರಹಣೆ ಮತ್ತು ಓದುವ ಶಕ್ತಿಯನ್ನು ಬಾಧಿಸಬಹುದು,ʼʼಎಂದು ಹೇಳಿದೆ.

ನ್ಯಾಯಾಲಯದಲ್ಲಿ ಉಪಸ್ಥಿತರಿದ್ದ ಕೇಂದ್ರ ಸರಕಾರದ ಪರ ವಕೀಲರು ತಮ್ಮ ವಾದ ಮಂಡಿಸುತ್ತಾ, ರಾಷ್ಟ್ರೀಯ ಶಿಕ್ಷಣ ನೀತಿಯಾನುಸಾರ ಒಂದನೇ ತರಗತಿಗೆ ಪ್ರವೇಶಕ್ಕೆ ಆರು ವರ್ಷ ವಯೋಮಿತಿಯನ್ನು 21 ರಾಜ್ಯಗಳು ನಿರ್ಧರಿಸಿವೆ ಎಂದು ಹೇಳಿದರು.

ಎರಡೂ ಕಡೆಗಳ ವಾದ ಆಲಿಸಿದ ನ್ಯಾಯಾಲಯ, ಹೆತ್ತವರ ವಾದವನ್ನು ತಿರಸ್ಕರಿಸಿ ಎಪ್ರಿಲ್‌ 11ರಂದು ದಿಲ್ಲಿ ಹೈಕೋರ್ಟ್‌ ಈ ಕುರಿತು ನೀಡಿದ ಆದೇಶವನ್ನು ಎತ್ತಿ ಹಿಡಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X