ವಾರಂಬಳ್ಳಿ ಗ್ರಾಪಂನ ಸಭಾಂಗಣದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ

ಬ್ರಹ್ಮಾವರ : ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಹಂದಾಡಿ ಹಾಗೂ ಚಾಂತಾರು ಗ್ರಾಪಂ ವ್ಯಾಪ್ತಿಯ ಒಣ ಹಾಗೂ ಹಸಿ ಕಸ ವಿಲೇವಾರಿಯ ಬಗ್ಗೆ ಇಂದು ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ವಾರಂಬಳ್ಳಿ ಗ್ರಾಪಂನ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಯಿತು.
ಸಭೆಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ಘಟಕ ನಿರ್ಮಾಣದ ಬಗ್ಗೆ ವಿಸ್ತೃತ ವರದಿಯೊಂದಿಗೆ ಅದನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚೆ ನಡೆಯಿತು. ಚರ್ಚೆಯ ವೇಳೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹಾಗೂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಅವರು ಹಲವು ವಿಷಯಗಳ ಕುರಿತು ಗಮನಸೆಳೆದರು.
ಈ ಸಂದರ್ಭದಲ್ಲಿ ವಾರಂಬಳ್ಳಿ ಗ್ರಾಪಂ ಅಧ್ಯಕ್ಷೆ ಗುಲಾಬಿ, ಹಂದಾಡಿ ಗ್ರಾಪಂ ಅಧ್ಯಕ್ಷ ಉದಯ ಪೂಜಾರಿ, ಚಾಂತಾರು ಗ್ರಾಪಂ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ. ಲಕ್ಷ್ಮಣ್, ವಾರಂಬಳ್ಳಿ ಗ್ರಾಪಂನ ಮಾಜಿ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ವಾರಂಬಳ್ಳಿ, ಹಂದಾಡಿ, ಚಾಂತಾರು ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಸದಸ್ಯರು ಹಾಗೂ ಟಿಪ್ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.









