ಮಂಗಳೂರು: ರಾಜ್ಯ ರೈತ ಸಂಘದ ಪ್ರತಿಭಟನೆ

ಮಂಗಳೂರು : ಭತ್ತ, ರಾಗಿ, ಜೋಳವನ್ನು ಕನಿಷ್ಟ ಬೆಂಬಲ ಬೆಲೆಯಲ್ಲಿ ಪೂರ್ಣವಾಗಿ ಖರೀದಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಮಂಗಳವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಭಾಗ್ಯಜ್ಯೋತಿ, ಕುಟೀರ ಜ್ಯೋತಿ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡದಂತೆ, ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ, ಕರ ನಿರಾಕರಣ ಚಳವಳಿಗಾರರ ಮನೆ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ, ಬಿತ್ತನೆ ಬೀಜವನ್ನು ಸಮರ್ಪಕವಾಗಿ ಪೂರೈಸುವಂತೆ, ರಸಗೊಬ್ಬರದ ಬೆಲೆ ಇಳಿಸುವಂತೆ, ದರಖಾಸ್ತು ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ರೈತ ಸಂಘದ ಜಿಲ್ಲಾಧ್ಯಕ್ಷ ಓಝ್ವಾಲ್ಡ್ ಪ್ರಕಾಶ್ ಫೆರ್ನಾಂಡಿಸ್, ಕಾರ್ಯದರ್ಶಿ ಡಿ.ಕೆ. ಶಾಹುಲ್ ಹಮೀದ್, ಉಪಾಧ್ಯಕ್ಷ ಆಲ್ವಿನ್ ಮೆನೆಜಸ್, ಹಿರಿಯ ರೈತರಾದ ಸನ್ನಿ ಡಿಸೋಜ ನೀರುಮಾರ್ಗ, ಸದಾನಂದ ಶೀತಲ್ ಪಾಲ್ಗೊಂಡಿದ್ದರು.
Next Story