ವಿಧಾನ ಪರಿಷತ್ತಿನ ಸದಸ್ಯ ಮಂಜುನಾಥ ಭಂಡಾರಿ ನೇತೃತ್ವದಲ್ಲಿ ಸಭೆ

ಮಂಗಳೂರು : ವಿಧಾನ ಪರಿಷತ್ತಿನ ಸದಸ್ಯ ಮಂಜುನಾಥ ಭಂಡಾರಿ ಬೆಳ್ತಂಗಡಿ ನಗರ ಬ್ಲಾಕ್‌ಗೆ ಒಳಪಟ್ಟ ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು ಜಿಪಂ ವ್ಯಾಪ್ತಿಯ ಗ್ರಾಪಂ ಸದಸ್ಯರು, ಪಕ್ಷದಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಪಕ್ಷದ ಪ್ರಮುಖ ಕಾರ್ಯಕರ್ತರು, ನಾಯಕರು, ಜಿಪಂ, ತಾಪಂ ಮಾಜಿ ಸದಸ್ಯರುಗಳ ಕ್ಷೇತ್ರವಾರು ಸಭೆ ನಡೆಸಿದರು.
ಪಂಚಾಯತ್‌ಗೆ ಸಂಬಂಧಪಟ್ಟ ಅನುದಾನ, ಜಮೀನು ಸಮಸ್ಯೆ, ೯-೧೧, ಅಧಿಕಾರ ಮೊಟಕುಗೊಳಿಸುತ್ತಿರುವ ಬಗ್ಗೆ ದೂರುಗಳನ್ನು ಆಲಿಸಿದ ಭಂಡಾರಿ ಸಂಬಂಧ ಪಟ್ಟವರಲ್ಲಿ ಚರ್ಚಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಪಂಚಾಯತ್ ರಾಜ್ ಸಂಘಟನೆಯನ್ನು ಗ್ರಾಮ ಮಟ್ಟದಲ್ಲಿ ಬಲಪಡಿಸಲು ಸೂಚಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಚಾಲಕ ಸುಭಾಷ್‌ಚಂದ್ರ ಶೆಟ್ಟಿ ಕೊಳ್ನಾಡು, ಬೆಳ್ತಂಗಡಿ ಬ್ಲಾಕ್ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಶೈಲೇಶ್ ಕುಮಾರ್, ಬೆಳ್ತಂಗಡಿ ಬ್ಲಾಕ್ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಂಜನ್ ಜಿ. ಗೌಡ, ಜಿಲ್ಲಾ ಸೇವಾದಳದ ಅಧ್ಯಕ್ಷ ಜೋಕಿಂ ಲೋಬೋ, ರಾಮಚಂದ್ರ ಗೌಡ, ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅಬಿನಂಧನ್ ಹರೀಶ್ ಕುಮಾರ್, ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷೆ ವಂದನಾ ಭಂಡಾರಿ ನಾರಾವಿ ಮತ್ತಿತರರು ಉಪಸ್ಥಿತರಿದ್ದರು.