Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪದಾಧಿಕಾರಿಗಳ ಆಯ್ಕೆಗೆ ಜೂನ್ 10ರೊಳಗೆ...

ಪದಾಧಿಕಾರಿಗಳ ಆಯ್ಕೆಗೆ ಜೂನ್ 10ರೊಳಗೆ ಚುನಾವಣೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ26 April 2022 9:05 PM IST
share
ಪದಾಧಿಕಾರಿಗಳ ಆಯ್ಕೆಗೆ ಜೂನ್ 10ರೊಳಗೆ ಚುನಾವಣೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು, ಎ. 26: ‘ಕೇಂದ್ರದ ಮಾಜಿ ಸಚಿವ ಸುದರ್ಶನ್ ನಾಚಿಯಪ್ಪನ್ ಅವರು ಪಕ್ಷದ ಚುನಾವಣಾಧಿಕಾರಿಯಾಗಿದ್ದು, ಇನ್ನು ಕೇರಳದ ಜೋಸೆಫ್ ಅಬ್ರಾಹಂ ಹಾಗೂ ಛತ್ತೀಸ್‍ಗಡದ ಮೋತಿಲಾಲ್ ದೇವಾನಂದ್ ಉಪ ಚುನಾವಣಾಧಿಕಾರಿಯಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 

ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಚುನಾವಣೆ ಪ್ರಕ್ರಿಯೆ ಭಾಗವಾಗಿ ನಮಗೆ ಪಕ್ಷದ ಚುನಾವಣೆ ಮತದಾರರ ಪಟ್ಟಿಯನ್ನು ಸಲ್ಲಿಸಲಾಗಿದೆ. ರಾಜ್ಯದಲ್ಲಿ ಒಟ್ಟು 78 ಲಕ್ಷ ಸದಸ್ಯರ ನೋಂದಣಿ ಆಗಿದೆ. ಮತ್ತೆ ಕೆಲವರು ಬುಕ್ ಮೂಲಕ ಸದಸ್ಯತ್ವ ಪಡೆದಿದ್ದು, ಅದನ್ನು ಮುಂದಿನ ದಿನಗಳಲ್ಲಿ ಸೇರಿಸಲಾಗುವುದು. ಆ ಮೂಲಕ ಇಡೀ ದೇಶದಲ್ಲೇ ನಾವು ಮೊದಲ ಸ್ಥಾನದಲ್ಲಿದ್ದೇವೆ' ಎಂದು ಹೇಳಿದರು.

‘ಈ ಸಂದರ್ಭದಲ್ಲಿ ಸದಸ್ಯತ್ವ ನೋಂದಣಿ ಮಾಡಿದ ನೋಂದಣಿದಾರ, ಮುಖ್ಯ ನೋಂದಣಿದಾರರು, ನಾಯಕರಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಅಭಿನಂದನೆ ತಿಳಿಸಿದ್ದಾರೆ. ನಾನು ಸದಸ್ಯರಾಗಿರುವ ಎಲ್ಲರನ್ನೂ ಅಭಿನಂದಿಸುತ್ತೇನೆ. ನೋಂದಣಿದಾರರು ಮುಂದಿನ 3-4 ದಿನಗಳಲ್ಲಿ ಸದಸ್ಯತ್ವ ನೋಂದಣಿ ಶುಲ್ಕ 5 ರೂ., ಗುರುತಿನ ಚೀಟಿ ಸ್ಮಾರ್ಟ್‍ಕಾರ್ಡ್ ಬೇಕಾದರೆ 10 ರೂ.ಶುಲ್ಕವನ್ನು ಕೆಪಿಸಿಸಿ ಕಚೇರಿಗೆ ರವಾನಿಸಬೇಕು. ನಂತರ ಸಂಬಂಧಿಸಿದ ಬ್ಲಾಕ್ ಮಟ್ಟದ ಪಟ್ಟಿಯನ್ನು ಪ್ರಕಟಿಸುತ್ತೇವೆ' ಎಂದು ತಿಳಿಸಿದರು.

‘ನಂತರ ಸದಸ್ಯತ್ವ ಪಡೆದ ಮತದಾರರ ಪಟ್ಟಿಯನ್ನು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಾಕಲಾಗುವುದು. ಬೂತ್ ಮಟ್ಟದಲ್ಲಿ ನಾಯಕರುಗಳಿಗೆ ವಾಟ್ಸಾಪ್, ಫೇಸ್ಬುಕ್ ಮೂಲಕ ರವಾನಿಸಲಾಗುವುದು. ಇನ್ನು ಸದಸ್ಯತ್ವದ ವಿಚಾರವಾಗಿ ದೂರು ಅಥವಾ ಅಹವಾಲುಗಳಿದ್ದರೆ ಅದನ್ನು ಸಲ್ಲಿಸಲು 15 ದಿನ ಕಾಲಾವಕಾಶ ನೀಡುತ್ತೇವೆ. ನಂತರ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚನೆ ಮಾಡಿ ಈ ಅಹವಾಲು ಸ್ವೀಕರಿಸುತ್ತೇವೆ. ನಂತರ ಅಂತಿಮ ಪಟ್ಟಿ ಪ್ರಕಟ ಮಾಡಲಾಗುವುದು' ಎಂದು ಮಾಹಿತಿ ನೀಡಿದರು.

‘ಬೂತ್ ಮಟ್ಟದ ಸಮಿತಿ ರಚನೆಯಾಗುತ್ತದೆ. ನಂತರ ಬ್ಲಾಕ್ ಪ್ರತಿನಿಧಿಗಳಾಗಿ ಪದಾಧಿಕಾರಿಗಳಾಗಲು ಅರ್ಹರಾಗುತ್ತಾರೆ. ಆನಂತರ ಎಲ್ಲೆಲ್ಲಿ ನೂತನ ಬ್ಲಾಕ್ ಅಧ್ಯಕ್ಷರ ನೇಮಕ ಮಾಡಬೇಕೋ ಅಲ್ಲಿ ಮೇ 29 ರಿಂದ ಜೂ.10ರ ಒಳಗೆ ಚುನಾವಣೆ ಮಾಡಲಾಗುವುದು. ಈ ಚುನಾವಣೆ ಸಮಯದಲ್ಲಿ ಪ್ರತಿ ಬ್ಲಾಕ್‍ನಲ್ಲೂ ಚುನಾವಣೆ ಮೇಲ್ವಿಚಾರಣಾ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಶಿವಕುಮಾರ್ ತಿಳಿಸಿದರು.

‘ಜಿಲ್ಲಾ ಮಟ್ಟದ ಚುನಾವಣೆ ಸಂದರ್ಭದಲ್ಲಿ ಹೊರ ರಾಜ್ಯಗಳಿಂದ ಚುನಾವಣಾ ಅಧಿಕಾರಿಗಳು ಬರಲಿದ್ದಾರೆ. ಬ್ಲಾಕ್ ಮಟ್ಟದ ಚುನಾವಣೆಗೆ ಬೇರೆ ಕ್ಷೇತ್ರಗಳಿಂದ ಚುನಾವಣಾಧಿಕಾರಿಗಳನ್ನು ನೇಮಿಸಲಾಗುತ್ತದೆ. ಮುಕ್ತ ಚುನಾವಣೆ ಮಾಡಲಾಗುವುದು. ನಂತರ ಜಿಲ್ಲಾ ಕಾಂಗ್ರೆಸ್ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆಯಲಿದ್ದು, ನಂತರ ಎಐಸಿಸಿ ಚುನಾವಣೆ ನಡೆಯಲಿದೆ. ಈ ಮೂಲಕವಾಗಿ ಕೇಡರ್ ಬೇಸ್ ಪಕ್ಷ ಮಾಡಲು, ಬೂತ್ ಮಟ್ಟದ ನಾಯಕರನ್ನು ಆಯ್ಕೆ ಮಾಡಲಿದ್ದು, ಇವರನ್ನು ಪ್ರಜಾಪ್ರತಿನಿಧಿ ಎಂದು ಕರೆಯಲಾಗುವುದು' ಎಂದು ಅವರು ತಿಳಿಸಿದರು.

‘ನಾನು ಪಕ್ಷದ ಪದಾಧಿಕಾರಿಗಳ ಸಭೆ ಮಾಡಲಿದ್ದು, ಅವರಿಗೆ ಇದೆಲ್ಲದರ ಮೇಲುಸ್ತುವಾರಿ ಜವಾಬ್ದಾರಿ ನೀಡಲಾಗುವುದು. ಮುಂದಿನ ದಿನಗಳಲ್ಲಿ ಮತ್ತಷ್ಟು ಪದಾಧಿಕಾರಿಗಳು ನೇಮಕವಾಗಲಿದ್ದು, ಅವರಿಗೂ ಜವಾಬ್ದಾರಿ ಹಂಚಲಾಗುವುದು. ಮುಂದೆ ಅಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯಲಿದ್ದು, ನಾನು ಮತ್ತೆ ಚುನಾವಣೆಗೆ ಸ್ಪರ್ಧಿಸಬೇಕಾಗುತ್ತದೆ. ಪಕ್ಷದ ಸದಸ್ಯರಾಗಿ, ಬ್ಲಾಕ್ ಮಟ್ಟದಲ್ಲಿ ಸ್ಪರ್ಧೆ ಮಾಡಿದ್ದವರು ಮಾತ್ರ ಈ ಚುನಾವಣೆಗೆ ಸ್ಪರ್ಧಿಸಬಹುದಾಗಿದೆ. ಸದಸ್ಯರಾಗದೆ, ತಮ್ಮ ಬೂತ್ ಪ್ರತಿನಿಧಿಸದಿದ್ದರೆ ಸ್ಪರ್ಧಿಸಲು ಸಾಧ್ಯವಿಲ್ಲ. ನಾನು ಹಾಗೂ ನನ್ನ ತಮ್ಮ ಒಂದೆ ಬೂತ್‍ನವರಾಗಿದ್ದು, ನಮ್ಮಿಬ್ಬರಲ್ಲಿ ಒಬ್ಬರು ಅಲ್ಲಿಂದ ಪ್ರತಿನಿಧಿಸಬಹುದು. ಮತ್ತೊಬ್ಬರು ಬೇರೆ ಬೂತ್‍ನಿಂದ ಪ್ರತಿನಿಧಿಸಬಹುದು. ಈ ಚುನಾವಣೆ ನಡೆಸಲು ಹೊರ ರಾಜ್ಯಗಳಿಂದ ಒಟ್ಟು 40 ಸದಸ್ಯರ ತಂಡ ಆಗಮಿಸಿದೆ. ಇನ್ನು ಪಕ್ಷದ ಹಿತದೃಷ್ಟಿಯಿಂದ ಮೇ 1ರಿಂದ ಪಕ್ಷದ ಸದಸ್ಯತ್ವ ಮುಂದುವರಿಯಲಿದ್ದು, ಈಗ ಸದಸ್ಯರಾಗುವವರಿಗೆ ಪಕ್ಷದ ಆಂತರಿಕ ಚುನಾವಣೆಯಲ್ಲಿ ಮತದಾನ ಹಕ್ಕು ಇರುವುದಿಲ್ಲ’ ಎಂದು ಹೇಳಿದರು.


‘‘ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಅನೇಕ ಸಲಹೆ ಕೊಟ್ಟಿದ್ದು, ಬಹಳ ಸಂತೋಷದಿಂದ ಸ್ವೀಕಾರ ಮಾಡಿದ್ದು, ವಾರಗಟ್ಟಲೆ ಚರ್ಚೆ ಮಾಡಿದ್ದೇವೆ. ನಮ್ಮ ಪಕ್ಷ ತನ್ನದೆ ಆದ ಇತಿಹಾಸ ಹೊಂದಿದ್ದು. ಪಕ್ಷವನ್ನು ಕಾರ್ಪೊರೇಟ್ ಆಫೀಸ್‍ನಂತೆ ನಡೆಸಲು ಆಗುವುದಿಲ್ಲ. ಅವರ ಸಲಹೆಗಳನ್ನು ನಾವು ಗೌರವಿಸಿದ್ದೇವೆ. ಅವರಿಗೆ ಅಭಿನಂದಿಸುತ್ತೇವೆ. ರಾಷ್ಟ್ರಮಟ್ಟದಲ್ಲಿ ಚರ್ಚೆ ಮಾಡಿ ಈ ವಿಚಾರವಾಗಿ ತೀರ್ಮಾನ ಕೈಗೊಂಡಿದ್ದು, ನಾನು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ. ರಾಷ್ಟ್ರ ಮಟ್ಟದ ನಾಯಕರ ತೀರ್ಮಾನವನ್ನು ನಾವು ಪಾಲಿಸುತ್ತೇವೆ’

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X