ಕಾರು ಢಿಕ್ಕಿ: ಜೋಕಾಲಿ ಆಡುತ್ತಿದ್ದ ಬಾಲಕಿ ಮೃತ್ಯು
ಕುಂದಾಪುರ : ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಜೋಕಾಲಿ ಯಲ್ಲಿ ಆಡುತ್ತಿದ್ದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕೋಟೇಶ್ವರ ನಿರಸ್ವಾಲೆ ರಸ್ತೆಯ ಬೆಟ್ಟುಮನೆ ಎಂಬಲ್ಲಿ ಎ.25ರಂದು ಅಪರಾಹ್ನ ವೇಳೆ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಸದಾನಂದ ಮತ್ತು ಅನಿತಾ ದಂಪತಿ ಪುತ್ರಿ ಪ್ರಾದಾನ್ಯ (9) ಎಂದು ಗುರುತಿಸಲಾಗಿದೆ.
ಬೇಸಿಗೆ ರಜೆಯಾದ್ದರಿಂದ ಮನೆಯಲ್ಲಿ ತುಂಬಾ ಮಕ್ಕಳಿದ್ದು, ಎಲ್ಲರು ಮನೆಯ ಅಂಗಳದಲ್ಲಿ ಮರಕ್ಕೆ ಸೀರೆಯಿಂದ ಜೋಕಾಲಿ ಕಟ್ಟಿ ಕುಳಿತು ಆಟ ಆಡುತ್ತಿದ್ದರು. ಆಗ ಇವರ ಸಂಬಂಧಿಕ ಸಂತೋಷ್, ಕಾರನ್ನು ಒಮ್ಮಲೇ ನಿರ್ಲಕ್ಷತನದಿಂದ ಅತೀ ವೇಗವಾಗಿ ಮುಂದಕ್ಕೆ ಚಲಾಯಿಸಿದ ಪರಿಣಾಮ ಕಾರು ಜೋಕಾಲಿ ಆಡುತ್ತಿದ್ದ ಪ್ರಾದಾನ್ಯಳಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಪ್ರಾಧಾನ್ಯ ಕೊಟೇಶ್ವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story