‘ಸಂಪುಟ ವಿಸ್ತರಣೆ' ಎಲ್ಲ ಭಾಗಗಳಿಗೂ ಪ್ರಾತಿನಿಧ್ಯ: ಸಿಎಂ ಬಸವರಾಜ ಬೊಮ್ಮಾಯಿ
ವಿಜಯಪುರ, ಎ. 26: ‘ಸಚಿವ ಸಂಪುಟ ವಿಸ್ತರಣೆಯಾದಲ್ಲಿ ರಾಜ್ಯದ ಎಲ್ಲ ಜಿಲ್ಲೆ ಹಾಗೂ ಪ್ರಾದೇಶಿಕವಾಗಿ ಎಲ್ಲ ಭಾಗಗಳಿಗೆ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಣೆ ನೀಡಿದ್ದಾರೆ.
ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಚಿವ ಸಂಪುಟ ವಿಸ್ತರಣೆಗೆ ವರಿಷ್ಟರು ಕರೆದಿಲ್ಲ. ದಿಲ್ಲಿಯಲ್ಲಿ ನಿರ್ಣಯವಾದಾಗ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ. ವಿಜಯಪುರದಲ್ಲಿ ಮೂರು ಶಾಸಕರಿದ್ದಾರೆ. ಯಾರಿಗೂ ಪ್ರಾತಿನಿಧ್ಯ ದೊರೆತಿಲ್ಲ. ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡಬೇಕು. ರಾಜಕೀಯ ಸ್ಥಿತಿಗತಿಯ ಮೇಲೆ ಕೆಲವು ನಿರ್ಣಯಗಳಾಗುತ್ತವೆ' ಎಂದು ವಿವರಣೆ ನೀಡಿದರು.
Next Story