Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪರಿಶಿಷ್ಟ ಪಂಗಡದವರ ಮೀಸಲಾತಿ ಏರಿಕೆ...

ಪರಿಶಿಷ್ಟ ಪಂಗಡದವರ ಮೀಸಲಾತಿ ಏರಿಕೆ ವಿಚಾರ; ನಿವೃತ್ತ ನ್ಯಾ. ನಾಗಮೋಹನದಾಸ್ ವರದಿ ಜಾರಿಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ27 April 2022 3:49 PM IST
share

ಮಂಗಳೂರು : ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಏರಿಕೆ ಮಾಡುವ ಕುರಿತಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್‌ರವರ ಏಕ ಸದಸ್ಯ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾತನಾಡಿದ ಸಮಿತಿಯ ಮುಖಂಡ ಬಿ. ಶಿವಪ್ಪ, 2022ರ ಮಾರ್ಚ್ 30ರಂದು ರಾಜ್ಯದ ವಿಧಾನಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದೆ. ಆಡಳಿತ ಹಾಗೂ ವಿಪಕ್ಷ ನಾಯಕರೂ ಸೇರಿದಂತೆ ವರದಿ ಜಾರಿಗೆ ಒತ್ತಾಯಿಸಲಾಗಿದೆ. ಮುಖ್ಯಮಂತ್ರಿಯವರ ನಿರ್ದೇಶನದ ಮೇರೆಗೆ ರಾಜ್ಯ ಸಚಿವರ ಮತ್ತು ಶಾಸಕರ ನಿಯೋಗ ಫ್ರೀಡಂ ಪಾರ್ಕ್‌ನಲ್ಲಿ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀಗಳು ನಡೆಸುತ್ತಿದ್ದ ಆರೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ೧೫ ದಿನಗಳ ಒಳಗೆ ಬೇಡಿಕೆ ಈಡೇರಿಸುವುದಾಗಿ ಆಶ್ವಾಸನೆ ನೀಡಿ ೨೪ ದಿನಗಳು ಕಳೆದರೂ ತೀರ್ಮಾನವಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

೨೦೧೧ರ ಜನಗಣತಿ ಪ್ರಕಾರ ಕರ್ನಾಟಕ ರಾಜ್ಯದ ಒಟ್ಟು ಜನಸಂಖ್ಯೆ ೬,೨೦,೯೫,೨೯೭ರಷ್ಟಿದ್ದು, ಪರಿಶಿಷ್ಟ ಜಾತಿಯ ಜನಸಂಖ್ಯೆ ೧,೦೪,೭೪,೯೯೨ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ೪೨,೪೮,೯೮೭ ಆಗಿದೆ. ರಾಜ್ಯದ ಜನಸಂಖ್ಯೆಯಲ್ಲಿ ಪರಿಶಿಷ್ಟ ಜಾತಿಯವರು ಶೇ. ೧೭.೧೫ ಮತ್ತು ಪರಿಶಿಷ್ಟ ಪಂಗಡದವರು ಶೇ. ೭ರಷ್ಟಿದ್ದಾರೆ. ಪ್ರಸ್ತುತ ೧೯೫೮ರಲ್ಲಿ ನಿಗದಿಯಾಗಿದ್ದ ಶೇ. ೩ರ ಮೀಸಲಾತಿ ಪ್ರಮಾಣ ಇಂದಿಗೂ ಜಾರಿಯಲ್ಲಿದೆ.

ಮುಖ್ಯವಾಗಿ ಪರಿಶಿಷ್ಟ ಪಂಗಡದವರಿಗೆ ಶೈಕ್ಷಣಿಕ ಸಂಸ್ಥೆಗಳ ಪ್ರವೇಶ ಮತ್ತು ರಾಜ್ಯ ಸರಕಾರದ ಸೇವೆಯಲ್ಲಿ ಮೀಸಲಾತಿ ಪ್ರಮಾಣವನ್ನು ಜನಸಂಖ್ಯೆಗೆ ಅನುಗುಣವಾಗಿ ಶೇ. ೭.೫ಕ್ಕೆ ಏರಿಕೆ ಮಾಡಬೇಕೆಂದು ಕಳೆದ ಹಲವಾರು ದಶಕಗಳಿಂದ ರಾಜ್ಯ ಸರಕಾರವನ್ನು ಒತ್ತಾಯಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮಹರ್ಷಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ೨೦೨೧ರ ಫೆಬ್ರವರಿ 9ರಂದು ನಡೆದ ಜಾತ್ರಾ ಮಹೋತ್ಸವದಲ್ಲಿ ಸಮುದಾಯದ ಬೇಡಿಕೆಯ ಬಗ್ಗೆ ಅಂದಿನ ಮುಖ್ಯಮಂತ್ರಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್‌ರವರ ಆಯೋಗದ ವರದಿ ಬಂದ ಕೂಡಲೇ ಮೀಸಲಾತಿ ಹೆಚ್ಚಿಸುವ ಆಶ್ವಾಸನೆ ನೀಡಿದ್ದರು. ಬಳಿಕ ಇದೀಗ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಆದ ಬಳಿಕವು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರು ಭೇಟಿ ಮಾಡಿ ಮೀಲಾತಿ ಹೆಚ್ಚಿಸುವ ಬಗ್ಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಅವರು ಹೇಳಿದರು.

ಇದೀಗ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಬೇಡಿಕೆ ನ್ಯಾಯಸಮ್ಮತವಾಗಿರುವುದರಿಂದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗ ಮೋಹನದಾಸ್ ಆಯೋಗದ ವರದಿ ಜಾರಿಗೊಳಿಸಲು ಜನಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದವರು ಹೇಳಿದರು.

ಗೋಷ್ಠಿಯಲ್ಲಿ ಕೆ.ಎಸ್. ಮೃತ್ಯುಂಜಯ, ಕೆ.ಎಚ್. ಮಲ್ಲೇಶಪ್ಪ, ಯೋಗೀಶ್, ಸಿದ್ದೇಶ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X