ಸಾವಿರ ಕಂಬದ ಜೈನ ಬಸದಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಡುಬಿದಿರೆ ತಾಲೂಕಿನ ಸಾವಿರ ಕಂಬಗಳ ಜೈನ ಬಸದಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಸ್ಥಳೀಯ ಶಾಸಕರಾದ ಉಮಾನಾಥ್ ಕೋಟ್ಯಾನ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.






.jpeg)


.jpeg)

