ಆಹಾರ ಸುರಕ್ಷಾ ಕಾಯ್ದೆಗಳ ಜಾರಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಎ.27: ಆಹಾರ ಸುರಕ್ಷಾ ಕಾಯ್ದೆಗಳ ಅನುಷ್ಠಾನಕ್ಕಾಗಿ ರಾಜ್ಯದಲ್ಲಿ ಪ್ರಯೋಗಾಲಯಗಳನ್ನು ತೆರೆಯಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.
ವಿಜಯಪುರ ಸಕ್ಷಮ ಪ್ರಾಧಿಕಾರ ದಾಖಲಿಸಿಕೊಂಡಿರುವ ಪ್ರಕರಣ ರದ್ದು ಕೋರಿ ವಿವಿಧ ಆಹಾರ ಪದಾರ್ಥಗಳ ಸಗಟು ವ್ಯಾಪಾರಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಆದೇಶ ನೀಡಿದೆ.
ಪರೀಕ್ಷಾ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತಾ ಮಂಡಳಿಯ(ಎನ್‍ಎಬಿಎಲ್) ಗುಣಮಟ್ಟಕ್ಕೆ ಅನುಗುಣವಾಗಿ ಈ ಪ್ರಯೋಗಾಲಯಗಳನ್ನು ತೆರೆಯಬೇಕು. ರಾಜ್ಯದ ಪ್ರತಿ ತಾಲೂಕಿನಲ್ಲೂ ಆಹಾರ ಸುರಕ್ಷಾ ಅಧಿಕಾರಿಗಳನ್ನು ನೇಮಕ ಮಾಡುವ ದಿಸೆಯಲ್ಲಿ ರಾಜ್ಯ ಸರಕಾರ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಪೀಠ ಸೂಚಿಸಿದೆ. ಈ ಪ್ರಕರಣದ ವಿಚಾರಣೆಯನ್ನು 2023ರ ಜನವರಿ ಮೊದಲ ವಾರಕ್ಕೆ ಮುಂದೂಡಿದೆ.
Next Story





