ಉಡುಪಿ : ಇಂದಿನ ದ್ವಿತೀಯ ಪಿಯು ಸಂಸ್ಕೃತ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು ಆರು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಪರೀಕ್ಷೆಗೆ ಒಟ್ಟು ೧೨೬೨ ಮಂದಿ ನೋಂದಾಯಿಸಿಕೊಂಡಿದ್ದು, ಅದರಲ್ಲಿ ೧೨೫೬ ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.