ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ದೂರು

ನಳಿನ್ ಕುಮಾರ್ ಕಟೀಲ್
ಹುಬ್ಬಳ್ಳಿ: ಇತ್ತೀಚೆಗೆ ಹಳೇಹುಬ್ಬಳ್ಳಿಯಲ್ಲಿ ನಡೆದ ದಾಂಧಲೆಗೆ ಸಿದ್ದರಾಮಯ್ಯ ಅವರು ಪ್ರೇರಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದು, ಈ ಸಂಬಂಧ ಅವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಗೆ ದೂರು ಸಲ್ಲಿಕೆಯಾಗಿದೆ.
ನಳಿನ್ ಕುಮಾರ್ ಕಟೀಲ್ ಅವರು, ಆಧಾರ ರಹಿತ ಆರೋಪ ಮಾಡಿದ್ದು, ಅವರಿಂದ ವಾರದೊಳಗೆ ದಾಖಲೆ ಪಡೆಯಬೇಕು, ಇಲ್ಲದಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ವೇದವ್ಯಾಸ ಕೌಲಗಿ ಅವರು ದೂರು ನೀಡಿದ್ದಾರೆ.
Next Story





