Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಿಂದಿ ರಾಷ್ಟ್ರಭಾಷೆ ವಿವಾದ; ಡಿ.ಕೆ....

ಹಿಂದಿ ರಾಷ್ಟ್ರಭಾಷೆ ವಿವಾದ; ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ28 April 2022 1:50 PM IST
share
ಹಿಂದಿ ರಾಷ್ಟ್ರಭಾಷೆ ವಿವಾದ; ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: "ನಾನು ಯಾರ ಟ್ವೀಟ್ ಬಗ್ಗೆಯೂ ಪ್ರತಿಕ್ರಿಯೆ ನೀಡಲು ಸಿದ್ಧನಿಲ್ಲ. ದೇಶದಲ್ಲಿ ಯಾವ, ಯಾವ ಭಾಷೆಗೆ ಯಾವ ಮಾನ್ಯತೆ ನೀಡಬೇಕು ಎಂದು ಸರ್ಕಾರ ಈಗಾಗಲೇ ತೀರ್ಮಾನ ಮಾಡಿದೆ. ನಮ್ಮ ದೇಶ ಅನೇಕ ಭಾಷೆಗಳಿಂದ ಕೂಡಿದ್ದು, ಪ್ರತಿಯೊಬ್ಬರಿಗೂ ಅವರವರ ಭಾಷೆ ಸ್ವಾಭಿಮಾನದ ವಿಷಯವಾಗಿದೆ. ನಮ್ಮ ರಾಜ್ಯದ ಕೊಡಗು, ಮಂಗಳೂರು ಭಾಗಗಳಲ್ಲಿ ಬೇರೆ ಭಾಷೆಗಳನ್ನು ಮಾತನಾಡಿದರೂ, ನಾವು ಅವರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ನಾವೆಲ್ಲ ಕನ್ನಡಿಗರು. ನಮಗೆ ನಮ್ಮದೇ ಆದ ಭಾಷೆ, ಧ್ವಜ, ಸ್ವಾಭಿಮಾನವಿದೆ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನಮ್ಮ ನೋಟಿನಲ್ಲಿ ಕನ್ನಡ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ನೀಡಿ ಮುದ್ರಣ ಮಾಡಲಾಗಿದೆ. ಈ ನೋಟು ರಾಜ್ಯ ಸೇರಿದಂತೆ ರಾಷ್ಟ್ರದಲ್ಲಿ ಚಲಾವಣೆಯಾಗುತ್ತದೆ. ಹೀಗಾಗಿ ಭಾಷೆ ವಿಚಾರದಲ್ಲಿ ಚರ್ಚೆಯ ಅಗತ್ಯ ಏನಿದೆ?

ದೇಶದ ಉತ್ತರ ಭಾಗದಲ್ಲಿ ಹಿಂದಿ ಭಾಷೆ ಮಾತನಾಡುತ್ತಿದ್ದು, ಆ ಭಾಷೆಗೆ ಯಾವ ರೀತಿ ಗೌರವ ನೀಡಬೇಕೋ ಅದನ್ನು ನೀಡಲಾಗುತ್ತಿದೆ. ಚಿತ್ರನಟರ ಮಾತಿಗೆ ನಾವು ಚರ್ಚೆ ಮಾಡುವ ಅಗತ್ಯವಿಲ್ಲ. ಒಂದು ವೇಳೆ ಕೇಂದ್ರ ಸಚಿವರು ಯಾರಾದರೂ ಈ ಬಗ್ಗೆ ಚರ್ಚೆ ಮಾಡಿದರೆ ಅದಕ್ಕೆ ಉತ್ತರ ನೀಡೋಣ.

ನಮ್ಮ ನೆಲ, ಜಲ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ಹೀಗಾಗಿ ನಮ್ಮ ಮೊದಲ ಪ್ರಾತಿನಿಧ್ಯ ಕನ್ನಡ ಭಾಷೆಯಾಗಿರುತ್ತದೆ. ನಂತರ ನಾವು ಸಂವಿಧಾನದಲ್ಲಿ ನೀಡಲಾಗಿರುವ ಹಕ್ಕಿನ ಪ್ರಕಾರ ಬೇರೆ ಭಾಷೆಗಳನ್ನು ಬಳಸಬಹುದು.

ನಮ್ಮ ಕೆಲವು ಸಂಸದರು ಹಿಂದಿ ಹಾಗೂ ಇಂಗ್ಲಿಷ್ ಭಾಷೆ ತಿಳಿದಿದ್ದರೂ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡು ತ್ತಾರೆ. ಇದಕ್ಕೆ ಅವಕಾಶವಿದೆ. ನನ್ನ ಸಹೋದರ ಹಲವು ಬಾರಿ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ್ದು, ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ವಿರೋಧಪಕ್ಷದ ನಾಯಕರಾಗಿರುವ ಕಾರಣ ಹಿಂದಿಯಲ್ಲಿ ಮಾತನಾಡುತ್ತಾರೆ. ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ನಮ್ಮ ಭಾಷೆಯ ಗೌರವ ಉಳಿಸಿಕೊಳ್ಳಲು ನಾವು ಏನು ಮಾಡಬೇಕು ಅದನ್ನು ಮಾಡೋಣ ಎಂದು ಪ್ರತಿಕ್ರಿಯೆ ನೀಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X