Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಟ ಅಜಯ್ ದೇವಗನ್ ಅತಿರೇಕದಿಂದ...

ನಟ ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ28 April 2022 5:48 PM IST
share
ನಟ ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ: ಕುಮಾರಸ್ವಾಮಿ

ಬೆಂಗಳೂರು, ಎ. 28: ‘ಚಿತ್ರನಟ ಕಿಚ್ಚ ಸುದೀಪ್ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ' ಎಂದು ಸಲಹೆ ನೀಡಿದ್ದಾರೆ.

‘ಹೆಚ್ಚು ಜನ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಹಿಂದಿ ಎಲ್ಲರ ಭಾಷೆಯಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ ಕೇವಲ 9ಕ್ಕಿಂತ ಕಡಿಮೆ ರಾಜ್ಯಗಳಲ್ಲಿ ಹಿಂದಿ 2ನೆ ಭಾಷೆ, ಇಲ್ಲವೇ 3ನೆ ಭಾಷೆ ಅಥವಾ ಅದೂ ಆಗಿಲ್ಲ. ಹೀಗಿದ್ದ ಮೇಲೆ ಅಜಯ್ ದೇವಗನ್ ಮಾತುಗಳು ಎಷ್ಟು ಸರಿ. ಡಬ್ ಮಾಡಬೇಡಿ ಎಂದರೆ ಏನರ್ಥ?' ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

‘ಮೊದಲಿನಿಂದಲೂ ಕೇಂದ್ರದಲ್ಲಿ ಆಡಳಿತ ನಡೆಸಿದ ‘ಹಿಂದಿ ರಾಜಕೀಯ ಪಕ್ಷಗಳು' ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕುವ ದುಷ್ಟ ಪ್ರಯತ್ನ ಮಾಡುತ್ತಿವೆ. ಕಾಂಗ್ರೆಸ್ ಆರಂಭ ಮಾಡಿದ ಅನ್ಯಭಾಷೆಗಳ ಹತ್ತಿಕ್ಕುವ ಕೃತ್ಯಗಳನ್ನು ಈಗ ಬಿಜೆಪಿ ಅತಿಯಾಗಿ ಮುಂದುವರಿಸುತ್ತಿದೆ. ಒಂದೇ ಪಕ್ಷ, ಒಂದೇ ತೆರಿಗೆ, ಒಂದೇ ಭಾಷೆ, ಒಂದೇ ಸರಕಾರ ಎನ್ನುವ ಸರ್ವಾಧಿಕಾರಿ ಮನಃಸ್ಥಿತಿಯ ಬಿಜೆಪಿ ಮತ್ತು ಅದರ ಹಿಂದಿ ರಾಷ್ಟ್ರೀಯವಾದದ ಮುಖವಾಣಿ ರೀತಿಯಲ್ಲಿ ದೇವಗನ್ ಬಡಬಡಿಸಿದ್ದಾರೆ' ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ

‘ದೇವಗನ್ ಅರ್ಥ ಮಾಡಿಕೊಳ್ಳಬೇಕು. ಕನ್ನಡ ಚಿತ್ರರಂಗ ಇವತ್ತು ಹಿಂದಿ ಚಿತ್ರರಂಗವನ್ನು ಮೀರಿ ಬೆಳೆಯುತ್ತಿದೆ. ಕನ್ನಡಿಗರು ಪ್ರೋತ್ಸಾಹಿಸಿದ ಪರಿಣಾಮ ಹಿಂದಿ ಚಿತ್ರರಂಗ ಬೆಳೆದಿದೆ. ಅವರ ‘ಫೂಲ್ ಔರ್ ಕಾಂಟೆ' ಸಿನಿಮಾ ಬೆಂಗಳೂರಿನಲ್ಲಿ ಒಂದು ವರ್ಷ ಪ್ರದರ್ಶನ ಆಗಿದ್ದನ್ನು ದೇವಗನ್ ಮರೆಯಬಾರದು. ಶ್ರೇಷ್ಠತೆಯ ವ್ಯಸನ ಭಾರತವನ್ನು ಒಡೆಯುತ್ತಿದೆ. ಬಿಜೆಪಿ ಭಿತ್ತಿದ ಈ ರೋಗ, ಅಂಟುಜಾಢ್ಯದಂತೆ ಹರಡುತ್ತಾ ದೇಶವನ್ನು ಛಿದ್ರಗೊಳಿಸುವಂತಿದೆ. ಭಾರತದ ಏಕತೆಗೆ ಇದು ಅಪಾಯಕಾರಿ' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಚಿತ್ರನಟ @KicchaSudeep ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ @ajaydevgn ಅಜಯ್ ದೇವಗನ್ ಅತಿರೇಖದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ.1/7

— H D Kumaraswamy (@hd_kumaraswamy) April 27, 2022

ಹೆಚ್ಚು ಜನ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಹಿಂದಿ ಎಲ್ಲರ ಭಾಷೆಯಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕೇವಲ 9ಕ್ಕಿಂತ ಕಡಿಮೆ ರಾಜ್ಯಗಳಲ್ಲಿ ಹಿಂದಿ 2ನೇ ಭಾಷೆ, ಇಲ್ಲವೇ 3ನೇ ಭಾಷೆ ಅಥವಾ ಅದೂ ಆಗಿಲ್ಲ. ಹೀಗಿದ್ದ ಮೇಲೆ ಅಜಯ್ ದೇವಗನ್ ಮಾತುಗಳು ಎಷ್ಟು ಸರಿ. ಡಬ್ ಮಾಡಬೇಡಿ ಎಂದರೆ ಏನರ್ಥ? 3/7

— H D Kumaraswamy (@hd_kumaraswamy) April 27, 2022

ಒಂದೇ ಪಕ್ಷ, ಒಂದೇ ತೆರಿಗೆ, ಒಂದೇ ಭಾಷೆ, ಒಂದೇ ಸರಕಾರ ಎನ್ನುವ ಸರ್ವಾಧಿಕಾರಿ ಮನಃಸ್ಥಿತಿಯ ಬಿಜೆಪಿ ಮತ್ತು ಅದರ ಹಿಂದಿ ರಾಷ್ಟ್ರೀಯವಾದದ ಮುಖವಾಣಿ ರೀತಿಯಲ್ಲಿ ದೇವಗನ್ ಬಡಬಡಿಸಿದ್ದಾರೆ. 5/7

— H D Kumaraswamy (@hd_kumaraswamy) April 27, 2022

ಶ್ರೇಷ್ಠತೆಯ ವ್ಯಸನ ಭಾರತವನ್ನು ಒಡೆಯುತ್ತಿದೆ. ಬಿಜೆಪಿ ಭಿತ್ತಿದ ಈ ರೋಗ, ಅಂಟುಜಾಡ್ಯದಂತೆ ಹರಡುತ್ತಾ ದೇಶವನ್ನು ಛಿದ್ರಗೊಳಿಸುವಂತಿದೆ. ಭಾರತದ ಏಕತೆಗೆ ಇದು ಅಪಾಯಕಾರಿ.7/7#ನಾವು_ಕನ್ನಡಿಗರು#ಕರ್ನಾಟಕದಲ್ಲಿ_ಕನ್ನಡವೇ_ಮೊದಲು#stopHindiImposition

— H D Kumaraswamy (@hd_kumaraswamy) April 27, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X