Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಾತಿ:...

ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಾತಿ: ಮಾಹಿತಿ ಆಯೋಗದ ಆದೇಶ ಎತ್ತಿಹಿಡಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ28 April 2022 6:18 PM IST
share
ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಾತಿ: ಮಾಹಿತಿ ಆಯೋಗದ ಆದೇಶ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು, ಎ.28: 2013ರಲ್ಲಿ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ (ಎಪಿಪಿ) ಹುದ್ದೆಗಳ ನೇಮಕಾತಿ ಪರೀಕ್ಷೆಯ ಉತ್ತರ ಪತ್ರಿಕೆ ಪ್ರಮಾಣಿಕೃತ ಪ್ರತಿ ನೀಡುವಂತೆ ರಾಜ್ಯ ಮಾಹಿತಿ ಆಯೋಗ ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 

ಈ ಕುರಿತಂತೆ ರಾಜ್ಯ ಅಭಿಯೋಜನಾ ಇಲಾಖೆ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋಟ್ ನ್ಯಾಯಪೀಠ ಈ ಆದೇಶ ಮಾಡಿದೆ.

ಪ್ರಕರಣವೇನು: 2013ರ ಆ.31 ಮತ್ತು ಸೆ.1ರಂದು ನಡೆದಿದ್ದ ಎಪಿಪಿ ಮತ್ತು ಎಜಿಪಿ ನೇಮಕಾತಿಯ ಮುಖ್ಯ ಪರೀಕ್ಷೆಯನ್ನು ಜಿ. ವಿಜಯ್ ಕುಮಾರ್ ಎಂಬುವರು ಬರೆದಿದ್ದರು. ಈ ಉತ್ತರ ಪತ್ರಿಕೆಯ ಪ್ರಮಾಣಿಕೃತ ಪ್ರತಿ ಕೋರಿ ಎಪಿಪಿ ಮತ್ತು ಎಜಿಪಿ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿಗೆ ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿದ್ದರು.

ಸಾರ್ವಜನಿಕ ಸಂಪರ್ಕ ಅಧಿಕಾರಿ ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅರ್ಜಿದಾರರು ಮಾಹಿತಿ ಹಕ್ಕು ಆಯೋಗದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಅದೂ ಸಹ ತಿರಸ್ಕಾರಗೊಂಡಾಗ ಆಯೋಗದ ಮುಂದೆ ಎರಡನೇ ಮೇಲ್ಮನವಿ ಸಲ್ಲಿಸಿದ್ದರು. ಎರಡನೇ ಬಾರಿ ಸಲ್ಲಿಸಿದ್ದ ಮೇಲ್ಮನವಿ ಪುರಸ್ಕರಿಸಿದ್ದ ಆಯೋಗ, ವಿಜಯ್ ಕುಮಾರ್ ಅವರಿಗೆ ಅವರ ಉತ್ತರ ಪತ್ರಿಕೆಯನ್ನು ಒಂದು ಗಂಟೆಕಾಲ ವೀಕ್ಷಿಸಲು ಉಚಿತವಾಗಿ ಅವಕಾಶ ಮಾಡಿಕೊಡಬೇಕು ಎಂದು ಎಪಿಪಿ ಮತ್ತು ಎಜಿಪಿ ನೇಮಕಾತಿ ಸಮಿತಿಗೆ 2016ರ ಜೂನ್ 31ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸಮಿತಿ ಮತ್ತು ಅಭಿಯೋಜನಾ ಇಲಾಖೆಗೆ ಹೈಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದ್ದವು.

ವಕೀಲರ ವಾದ-ಪ್ರತಿವಾದ: ಸಮಿತಿ ಪರ ಸರಕಾರಿ ವಕೀಲರು ಹಾಜರಾಗಿ, ಎಪಿಪಿ ಮತ್ತು ಎಜಿಪಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಈ ಕುರಿತು ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಮೂಲ ಉತ್ತರ ಪತ್ರಿಕೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಕರಣದ ತನಿಖೆ ಬಾಕಿಯಿರುವಾಗ ಅಭ್ಯರ್ಥಿಯ ಉತ್ತರ ಪತ್ರಿಕೆಯ ಪ್ರಮಾಣೀಕೃತ ಪ್ರತಿಯನ್ನು ಆರ್‍ಟಿಐ ಕಾಯ್ದೆ ಅಡಿ ಒದಗಿಸಿದರೆ ತನಿಖೆಯಲ್ಲಿ ಮಧ್ಯಪ್ರವೇಶಿಸಿದಂತಾಗುತ್ತದೆ. ತನಿಖೆಯಲ್ಲಿ ಹಸ್ತಕ್ಷೇಪ ಮಾಡುವಂತಹ ಆತಂಕವಿದ್ದಾಗ ಆರ್‍ಟಿಐ ಕಾಯ್ದೆ ಅಡಿ ಮಾಹಿತಿ ಒದಗಿಸುವುದಕ್ಕೆ ಕಾಯ್ದೆಯ ಸೆಕ್ಷನ್ 8(1)(ಎಚ್) ಅಡಿಯಲ್ಲಿ ವಿನಾಯ್ತಿ ಇದೆ. ಆದ್ದರಿಂದ ಮಾಹಿತಿ ಹಕ್ಕು ಆಯೋಗದ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.

ಮಾಹಿತಿ ಆಯೋಗದ ಪರ ವಕೀಲರು ವಾದಿಸಿ, ವಿಜಯ್ ಕುಮಾರ್ ಅವರು ಕೇವಲ ಉತ್ತರ ಪತ್ರಿಕೆಗಳ ಪ್ರಮಾಣಿಕೃತ ಪ್ರತಿಯನ್ನಷ್ಟೇ ಕೋರಿದ್ದಾರೆ. ಈಗಾಗಲೇ ಮೂಲ ಪ್ರತಿಗಳು ಲೋಕಾಯುಕ್ತ ಪೊಲೀಸರ ಸುಪರ್ದಿಯಲ್ಲಿದೆ. ಪ್ರಮಾಣಿಕೃತ ಪ್ರತಿ ನೀಡುವುದರಿಂದ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದಂತಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. 

ವಾದ-ಪ್ರತಿವಾದ ಆಲಿಸಿದ ಪೀಠ, ಆರ್‍ಟಿಐ ಕಾಯ್ದೆಯ ಸೆಕ್ಷನ್ 8(1)(ಎಚ್) ಪ್ರಕಾರ, ಮಾಹಿತಿ ಹಕ್ಕು ಕಾಯ್ದೆ ಅಡಿ ಕೋರುವ ಮಾಹಿತಿಗಳು ತನಿಖೆಗೆ ಅಡ್ಡಿ ಉಂಟಾಗುತ್ತದೆ ಎಂಬ ಆತಂಕವಿದ್ದಾಗ ಮಾಹಿತಿ ನಿರಾಕರಿಸಬಹುದು.

ಆದರೆ, ಈ ಪ್ರಕರಣದಲ್ಲಿ ವಿಜಯ್ ಕುಮಾರ್ ಸೇರಿದಂತೆ ಎಲ್ಲ ಅಭ್ಯರ್ಥಿಗಳ ಮೂಲ ಉತ್ತರ ಪತ್ರಿಕೆಗಳನ್ನು ಲೋಕಾಯುಕ್ತ ಪೆÇಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೀಗಿರುವಾಗ ಉತ್ತರ ಪತ್ರಿಕೆಗಳ ನಕಲು ಪ್ರತಿಯನ್ನು ಪ್ರಮಾಣೀಕರಿಸಿ ನೀಡಿದರೆ ತನಿಖೆಯಲ್ಲಿ ಮಧ್ಯಪ್ರವೇಶ ಮಾಡಿದಂತಾಗುವುದಿಲ್ಲ. ಮೇಲಾಗಿ, ವಿಜಯ್ ಕುಮಾರ್ ತಮ್ಮ ಉತ್ತರ ಪತ್ರಿಕೆಯನ್ನಷ್ಟೇ ಕೇಳಿದ್ದಾರೆ. ಇತರೆ ಯಾವುದೇ ಅಭ್ಯರ್ಥಿಯ ಉತ್ತರ ಪತ್ರಿಕೆಯನ್ನು ಕೇಳಿಲ್ಲ. ಹೀಗಾಗಿ ಮಾಹಿತಿ ಹಕ್ಕು ಆಯೋಗದ ಆದೇಶ ಸೂಕ್ತವಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X