ಅಪಘಾತ: ಗಾಯಾಳು ಮೃತ್ಯು
ಕುಂದಾಪುರ : ನಗರದ ವಿನಯ ನರ್ಸಿಂಗ್ ಆಸ್ಪತ್ರೆ ಸಮೀಪದ ಕ್ಯಾಂಟಿನ್ ಎದುರಿನ ರಾ.ಹೆ.೬೬ರಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯ ಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಎ.೨೭ರಂದು ರಾತ್ರಿ ವೇಳೆ ಮೃತಪಟ್ಟಿದ್ದಾರೆ.
ಮೃತರನ್ನು ವಡೇರಹೋಬಳಿಯ ರವಿ ಪೂಜಾರಿ ಎಂದು ಗುರುತಿಸಲಾಗಿದೆ. ಎ.೨೬ರಂದು ರಾತ್ರಿ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಜೀಪು ರಸ್ತೆ ದಾಟುತ್ತಿದ್ದ ರವಿ ಪೂಜಾರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





