ಉಡುಪಿ: ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣೆ

ಉಡುಪಿ; ನವೋದಯ ಸ್ವಸಹಾಯ ಸಂಘಗಳಲ್ಲಿ ಏಕತೆ ಹಾಗೂ ಸಮಾನತೆಯನ್ನು ಮೂಡಿಸುವ ಉದ್ದೇಶದಿಂದ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣೆ ಮಾಡುತ್ತಿದ್ದು, ಬುಧವಾರ ಉಡುಪಿ ತಾಲೂಕಿನ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಉಡುಪಿ ಡಯಾನಾ ಹೋಟೆಲ್ ನ ಸಭಾಂಗಣದಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ , ಗ್ರಾಮೀಣ ಜನರ ಬದುಕಿಗೆ ಆಧಾರವಾಗಿರುವ ನವೋದಯ ಸ್ವಸಹಾಯ ಸಂಘಗಳು ಸಾಮಾಜಿಕ ಪರಿವರ್ತನೆಯನ್ನು ಮಾಡಿದೆ. ಡಾ.ಎಂ.ಎನ್. ರಾಜೇಂದ್ರ ಕುಮಾರ್ ನಾಯಕತ್ವದಲ್ಲಿ ನವೋದಯ ಸ್ವಸಹಾಯ ಸಂಘಗಳು ಸಂಘಟನಾತ್ಮಕವಾಗಿ ಬಡವರ್ಗದ ಜನರ ಆರ್ಥಿಕ ಶಕ್ತಿಯಾಗಿ ಬೆಳೆದಿವೆ ಎಂದರು.
ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರುಗಳಾದ ಭಾಸ್ಕರ್ ಎಸ್.ಕೋಟ್ಯಾನ್ , ವಾದಿರಾಜ ಶೆಟ್ಟಿ ಎಂ , ರಾಜು ಪೂಜಾರಿ, ಅಶೋಕ್ ಕುಮಾರ್ ಶೆಟ್ಟಿ ,ರಾಜೇಶ್ ರಾವ್ , ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ , ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಸುನಿಲ್ ಕುಮಾರ್ ಬಜಗೋಳಿ ಬ್ಯಾಂಕಿನ ಅಧಿಕಾರಿಗಳಾದ ಅಶೋಕ್ ಕುಮಾರ್ , ನಿತ್ಯಾನಂದ ಸೇರಿಗಾರ್ , ಮೊದಲಾದವರು ಉಪಸ್ಥಿತರಿದ್ದರು.