Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. "ಧರ್ಮ ರಾಜಕಾರಣದ ಹಸು...

"ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದೆ"

ಹಿಂದಿ ಹೇರಿಕೆ ವಿರುದ್ಧ ಸಿದ್ದರಾಮಯ್ಯ ಕಿಡಿ

ವಾರ್ತಾಭಾರತಿವಾರ್ತಾಭಾರತಿ29 April 2022 9:37 AM IST
share
ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದೆ

ಬೆಂಗಳೂರು, ಎ.29: ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಹಿಂದಿ ಹೇರಿಕೆ ಕುರಿತಾಗಿ ಪ್ರತಿಕ್ರಿಯಿಸಿರುವ ಅವರು, ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು "ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ... ಎನ್ನುವ  ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು ಎಂದಿದ್ದಾರೆ.

ಇಂಗ್ಲಿಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ ಎಂದಿರುವ ಸಿದ್ದರಾಮಯ್ಯ ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ  ಹೌದು,‌ ಪರಿಸರದ ಭಾಷೆ ಕೂಡಾ ಎಂದಿದ್ದಾರೆ.

ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ ಎಂದು ಕಿವಿಮಾತು ಹೇಳಿದ್ದಾರೆ.

ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ,  ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ.

ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ.ಟಿ.ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದಿಲ್ಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ ಎಂದು ಕಿವಿಮಾತು ಹೇಳಿದ್ದಾರೆ.

ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಶಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ,‌‌ ಅಪ್ಪಿಕೊಂಡ ಪಕ್ಷ. ಒಂದು ಧರ್ಮ,‌ ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ‌ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ.

ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ.‌ ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ.

ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ‌ ಯಶಸ್ಸು ಕಾಣುವುದನ್ನು‌ ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X