Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಶಾಸಕ ಜಿಗ್ನೇಶ್ ಮೇವಾನಿ ಬಂಧನ...

ಮೈಸೂರು: ಶಾಸಕ ಜಿಗ್ನೇಶ್ ಮೇವಾನಿ ಬಂಧನ ಖಂಡಿಸಿ ದಸಂಸ ಪ್ರತಿಭಟನೆ

ಜಿಗ್ನೇಶ್ ಮೇವಾನಿ ಬಂಧನ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನ: ಚೋರನಹಳ್ಳಿ ಶಿವಣ್ಣ

ವಾರ್ತಾಭಾರತಿವಾರ್ತಾಭಾರತಿ29 April 2022 10:42 AM IST
share
ಮೈಸೂರು: ಶಾಸಕ ಜಿಗ್ನೇಶ್ ಮೇವಾನಿ ಬಂಧನ ಖಂಡಿಸಿ ದಸಂಸ ಪ್ರತಿಭಟನೆ

ಮೈಸೂರು: ಗುಜರಾತ್ ನ ವಡಗಾವ್ ಕ್ಷೇತ್ರದ ದಲಿತ ಶಾಸಕ ಜಿಗ್ನೇಶ್ ಮೆವಾನಿಯರ ಬಂಧನ ಅಭಿವ್ಯಕ್ತಿ ಸ್ವಾತಂತ್ರ್ಯದ ಬಂಧನವಾಗಿದೆ. ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ  ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಗುರುವಾರ ಪತ್ರಿಭಟನೆ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಮಾತನಾಡಿ, ಶಾಸಕ ಜಿಗ್ನೇಶ್ ಮೇವಾನಿ ಅವರು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ “ಗೋಡ್ಸೆಯನ್ನು ದೇವರಂತೆ ಪರಿಗಣಿಸುವ ಪ್ರಧಾನಿ ನರೇಂದ್ರ ಮೋದಿ ಅವರು, ಗುಜರಾತ್‍ನಲ್ಲಿ ಕೋಮುಘರ್ಷಣೆಗಳ ವಿರುದ್ಧ ಶಾಂತಿ ಮತ್ತು ಸೌರ್ಹಾದತೆಗಾಗಿ ಮನವಿ ಮಾಡಬೇಕೆಂದು ಎಪ್ರಿಲ್ 18 ರಂದು ಟ್ವೀಟ್ ಮಾಡಿದ್ದನ್ನೇ ನೆಪ ಮಾಡಿಕೊಂಡು ಅವರಿಗೆ ಎಫ್‍ಐಆರ್ ಪ್ರತಿಯನ್ನು ನೀಡದೆ ಬಂಧಿಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಧಮನಕಾರಿ ನೀತಿಯಾಗಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಶಾಂತಿ ಸೌಹಾರ್ದತೆಯನ್ನು ಕದಡುತ್ತಾ ಕೋಮುಗಲಭೆಗಳನ್ನು ಎಬ್ಬಿಸುವ ಗಲಭೆಕೋರರನ್ನು ಹತ್ತಿಕ್ಕದೇ ಕೋಮು ಸೌಹಾರ್ದತೆಗೆ ಮನವಿ ಮಾಡುವ ಪ್ರಗತಿಪರ ಹೋರಾಟಗಾರ ಜಿಗ್ನೇಶ್ ಮೆವಾನಿಯವರ ಬಂಧನ ಅತ್ಯಂತ ಖಂಡನೀಯ. ಭಾರತದಲ್ಲಿ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಇಂತಹ ಕೃತ್ಯಗಳಿಗೆ ಇತಿಶ್ರೀ ಹಾಡಿ ಸಂವಿಧಾನಾತ್ಮಕವಾಗಿ ಹಕ್ಕುಗಳನ್ನು ಎತ್ತಿಹಿಡಿಯಬೇಕೆಂದು ಆಗ್ರಹಿಸಿದರು. 

ಜಿಗ್ನೇಶ್ ಮೆವಾನಿಯವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಜಾಗೊಳಿಸಿ ಬಂಧನದಿಂದ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ಕೆ.ವಿ.ದೇವೇಂದ್ರ, ಕಿರಂಗೂರು ಸ್ವಾಮಿ, ಯಡದೊರೆ ಮಹದೇವಯ್ಯ, ಹಾರೋಹಳ್ಳಿ ನಟರಾಜ್, ಶಿವಮೂರ್ತಿ ಶಂಕರಪುರ, ಸಣ್ಣಯ್ಯ ಲಕ್ಕೂರು, ಉಗ್ರನರಸಿಂಹೇಗೌಡ,  ಆಲಗೂಡು ಚಂದ್ರಶೇಖರ್, ಡಾ.ಹರೀಶ್ ಕುಮಾರ್, ಎಸ್‍ಡಿಪಿಐ ಜಿಲ್ಲಾಧ್ಯಕ್ಷ ರಫತ್ ಉಲ್ಲಾ ಖಾನ್, ಪ್ರಭುಸ್ವಾಮಿ ಹಗಿನವಾಳು, ದೇವರಾಜು ಚಿಕ್ಕಹಳ್ಳಿ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X